Select Your Language

Notifications

webdunia
webdunia
webdunia
Monday, 24 February 2025
webdunia

ಮಹಾಕುಂಭಮೇಳ ಕಾಲ್ತುಳಿತ ಪ್ರಕರಣ: ಬೆಳಗಾವಿಯ ಇಬ್ಬರು ದುರ್ಮರಣ

MahakumbhMela 2025 Stampede Case, Reason For MahakumbhMela 2025,  PrayagRaj

Sampriya

ಬೆಳಗಾವಿ , ಬುಧವಾರ, 29 ಜನವರಿ 2025 (15:47 IST)
ಬೆಳಗಾವಿ: ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ  ಬೆಳಗಾವಿಯ ತಾಯಿ-ಮಗಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಮೃತರನ್ನು ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ್ (50) ಮೇಘಾ ಹತ್ತರವಾಠ್ ಎಂದು ಗುರುತಿಸಲಾಗಿದೆ.

ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿದ ಬಳಿಕ ಇಬ್ಬರನ್ನೂ ಪ್ರಯಾಗ್‍ರಾಜ್‍ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರೂ ಸಾವಿಗೀಡಾಗಿದ್ದಾರೆ.

ಬೆಳಗಾವಿಯಲ್ಲಿರುವ ಕುಟುಂಬಸ್ಥರಿಗೆ ಇಂದು (ಬುಧವಾರ) ಬೆಳಗ್ಗೆಯಿಂದ ಇಬ್ಬರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಫೋನ್‌ ರಿಂಗ್ ಆಗುತ್ತಿದ್ದರೂ, ರಿಸೀವ್ ಮಾಡದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕದಲ್ಲಿದ್ದರು.

ಮೃತರು ಮೂರು ದಿನಗಳ ಹಿಂದೆ ಸಾಯಿರಥ ಟ್ರಾವೆಲ್ ಏಜೆನ್ಸಿ ಮೂಲಕ 13 ಜನರ ತಂಡದಲ್ಲಿ ಅವರು ತೆರಳಿದ್ದರು ಎಂದು ತಿಳಿದು ಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಾಕುಂಭಮೇಳದಿಂದ ವಾಪಾಸ್ಸಾಗುತ್ತಿದ್ದ ವೇಳೆ ಅಪಘಾತ: ಮೈಸೂರಿನ ಇಬ್ಬರು ಸಾವು