Select Your Language

Notifications

webdunia
webdunia
webdunia
webdunia

'ಮಹಾನಾಯಕ' ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ- ರಮೇಶ್ ಜಾರಕಿಹೊಳಿ

ಬೆಂಗಳೂರು
ಬೆಂಗಳೂರು : ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಮಹಾನಾಯಕ ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2020ರ ಫೆಬ್ರವರಿ 26ರಂದು ನಾನು ಸಚಿವನಾದೆ. ಆಗ ಒಬ್ಬ  ಮಹಾನಾಯಕ ನನಗೆ ಚಾಲೆಂಜ್ ಹಾಕಿದ್ದ. ಈ ಇಲಾಖೆಯನ್ನ ಕೇವಲ 3 ತಿಂಗಳು ನಡೆಸ್ತಾನೆಂದಿದ್ದ.

ನನ್ನ ಇಲಾಖೆ  ರಾಜ್ಯವೇ ಮೆಚ್ಚುವಂತೆ  ಕೆಲಸ ಮಾಡಿದೆ. ಹೀಗಾಗಿ ನನ್ನ ವಿರುದ್ಧ ಅವರು ಷಡ್ಯಂತ್ರ ನಡೆಸಿದ್ದಾರೆ. ಹೀಗಾಗಿ ಎಷ್ಟೇ ಖರ್ಚಾದ್ರೂ ಅವರನ್ನು ಜೈಲಿಗೆ ಹಾಕುವವರೆಗೂ ಬಿಡುವುದಿಲ್ಲ. ಎಷ್ಟೇ ಪ್ರಭಾವಿಯಾಗಿದ್ದರೂ ಸರಿ ಜೈಲಿಗೆ ಹಾಕಿಸುತ್ತೇನೆ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆ ಎರಡು ಫ್ಲ್ಯಾಟ್ ನಲ್ಲಿ ನಡೆದಿತ್ತು ಷಡ್ಯಂತ್ರ: ರಮೇಶ್ ಜಾರಕಿಹೊಳಿ