Select Your Language

Notifications

webdunia
webdunia
webdunia
webdunia

ವಿಮೆ ಯೋಜನೆಯನ್ನು ಮಹಾರಾಷ್ಟ್ರದ ಸಂಪುಟ ನಿರ್ಣಯ ಘೋಷಣೆ ಅಕ್ಷಮ್ಯ ಅಪರಾಧ : ಸಿಎಂ ವಾಗ್ದಾಳಿ

ವಿಮೆ ಯೋಜನೆಯನ್ನು ಮಹಾರಾಷ್ಟ್ರದ ಸಂಪುಟ ನಿರ್ಣಯ ಘೋಷಣೆ ಅಕ್ಷಮ್ಯ ಅಪರಾಧ : ಸಿಎಂ ವಾಗ್ದಾಳಿ
bangalore , ಗುರುವಾರ, 16 ಮಾರ್ಚ್ 2023 (18:56 IST)
ಗಡಿ ಕನ್ನಡಿಗರಿಗೆ ಆರೋಗ್ಯ ವಿಮೆ ಯೋಜನೆಯ ಮಹಾರಾಷ್ಟ್ರ ಸಚಿವ ಸಂಪುಟದ ನಿರ್ಣಯವನ್ನು ತೀವ್ರವಾಗಿ ಖಂಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಕರ್ನಾಟಕ ಗಡಿ ಭಾಗದ ಜನರಿಗೆ ಆರೋಗ್ಯ ಯೋಜನೆ ವಿಮೆ ಯೋಜನೆಯನ್ನು ಮಹಾರಾಷ್ಟ್ರದ ಸಂಪುಟ ನಿರ್ಣಯ ಘೋಷಿಸಿರುವುದು ಅಕ್ಷಮ್ಯ ಅಪರಾಧ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ಮಾತನಾಡಿದಾಗ ಸುಪ್ರೀಂಕೋರ್ಟ್ ಆದೇಶ ಬರುವವರೆಗೆ ಕಾಯಬೇಕು. ಯಾವುದೇ ಪ್ರಚೋದನೆ ಯಾಗಬಾರದೆಂದು ಒಪ್ಪಲಾಗಿತ್ತು. ಈಗ ಅದರ ಉಲ್ಲಂಘನೆಯಾಗಿದೆ. ಕೂಡಲೇ ಆಜ್ಞೆಯನ್ನು ಹಿಂದೆಗೆದುಕೊಳ್ಳಬೇಕು. ಈ ವಿಚಾರವನ್ನು ಗೃಹ ಸಚಿವರ ಗಮನಕ್ಕೂ ತರಲಾಗುವುದು. ಈ ರೀತಿಯ ಯೋಜನೆಗಳನ್ನು ನಾವೂ ಕೂಡ ಪ್ರಕಟಿಸಬಹುದು. ಹಲವಾರು ತಾಲ್ಲೂಕುಗಳು, ಗ್ರಾಮ ಪಂಚಾಯಿತಿ ಗಳು ಮಹಾರಾಷ್ಟ್ರದಲ್ಲಿ ನಮಗೆ ನ್ಯಾಯ ಸಿಗುತ್ತಿಲ್ಲ, ಕರ್ನಾಟಕಕ್ಕೆ ಸೇರಬೇಕು ಎಂದು ಈಗಾಗಲೇ ನಿರ್ಣಯ ಮಾಡಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಇದ್ದಾಗ ಮಹಾರಾಷ್ಟ್ರದ ಸರ್ಕಾರ ಬಹಳ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಟೀಕಿಸಿದ್ರು

Share this Story:

Follow Webdunia kannada

ಮುಂದಿನ ಸುದ್ದಿ

ಎಲೆಕ್ಷನ್ ಹೊತ್ತಲ್ಲೇ ಶುರುವಾಯ್ತು ಡ್ರಗ್ಸ್ ಹಾವಳಿ..!