Select Your Language

Notifications

webdunia
webdunia
webdunia
webdunia

ಮಹಾರಾಷ್ಟ್ರ ಚುನಾವಣೆ: ರೈತರ ಸಾಲ ಮನ್ನಾ ಸೇರಿ ಭರಪೂರ ಭರವಸೆ ನೀಡಿದ ಬಿಜೆಪಿ ಪ್ರಣಾಳಿಕೆ

Maharashtra Assembly Election

Sampriya

ಮುಂಬೈ , ಭಾನುವಾರ, 10 ನವೆಂಬರ್ 2024 (13:17 IST)
Photo Courtesy X
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಅಖಾಢ ರಂಗೇರಿದೆ. ಮತದಾನಕ್ಕೆ ಒಂದು ವಾರ ಬಾಕಿ ಇರುವಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು  ಬಿಜೆಪಿಯ ಪ್ರಣಾಳಿಕೆಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಭರಪೂರ ಭರವಸೆ ನೀಡಿಲಾಗಿದೆ.

ಪ್ರಣಾಳಿಕೆಯಲ್ಲಿ ರೈತರು, ಮಹಿಳೆಯರು ಮತ್ತು ಯುವಕರ ಮೇಲೆ ವಿಶೇಷ ಗಮನ ಹರಿಸಲಾಗಿದೆ. ಬಡವರ ಕಲ್ಯಾಣಕ್ಕೆ ಬಿಜೆಪಿ ಬದ್ದವಾಗಿದೆ ಎಂದು ಸಂಕಲ್ಪ ಪತ್ರವನ್ನು (ಪ್ರಣಾಳಿಕೆ) ಬಿಡುಗಡೆ ಮಾಡಿದ ಅಮಿತ್ ಶಾ, ಇದು ಮಹಾರಾಷ್ಟ್ರದ ಆಶಯಗಳ ನಿರ್ಣಯ ಪತ್ರ ಎಂದು ಹೇಳಿದರು.

ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ್, ಮುಂಬೈ ಬಿಜೆಪಿ ಮುಖ್ಯಸ್ಥ ಆಶಿಶ್ ಶೇಲಾರ್, ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.

ರೈತರ ಸಾಲ ಮನ್ನಾ, 25 ಲಕ್ಷ ಉದ್ಯೋಗ ಸೃಷ್ಟಿ, ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ವಿದ್ಯುತ್ ಬಿಲ್‌ಗಳಲ್ಲಿ ಶೇ. 30ರಷ್ಟು ರಿಯಾಯಿತಿ, ವೃದ್ಧಾಪ್ಯ ವೇತನ ₹ 2,100, 25,000 ಮಹಿಳಾ ಪೊಲೀಸರ ನೇಮಕಾತಿ, ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15,000, ಹಳ್ಳಿಗಳಿಗೆ ಉತ್ತಮ ರಸ್ತೆ ಸೇರಿದಂತೆ ಹಲವು ಭರವಸೆ ನೀಡಲಾಗಿದೆ.

ಮಹಾರಾಷ್ಟ್ರದಲ್ಲಿ ನವೆಂಬರ್ 20 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ನ. 23ರಂದು ರಾಜ್ಯದ ಮತಗಳ ಎಣಿಕೆ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಭಾವಿ ಸಚಿವರಿಗೆ ಕಾಂಗ್ರೆಸ್ ಮುಖಂಡನಿಂದಲೇ ಕಪಾಳಮೋಕ್ಷ: ಎಚ್‌ಡಿಕೆ ಲೇವಡಿ