Select Your Language

Notifications

webdunia
webdunia
webdunia
Saturday, 12 April 2025
webdunia

ಮಹಾರಾಷ್ಟ್ರದಲ್ಲಿ ಮತ್ತೆರಡು ಒಮಿಕ್ರಾನ್ ಪ್ರಕರಣ ಪತ್ತೆ: ದೇಶದಲ್ಲಿ ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆ

ಮಹಾರಾಷ್ಟ್ರದಲ್ಲಿ ಮತ್ತೆರಡು ಒಮಿಕ್ರಾನ್ ಪ್ರಕರಣ ಪತ್ತೆ
bangalore , ಮಂಗಳವಾರ, 14 ಡಿಸೆಂಬರ್ 2021 (21:06 IST)
ಮಹಾರಾಷ್ಟ್ರದಲ್ಲಿ ಮತ್ತೆ ಎರಡು ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಒಟ್ಟು ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.
ಇದೀಗ ಪತ್ತೆಯಾದ ಸೋಂಕಿತರು ದುಬೈ ಪ್ರಯಾಣದ ಇತಿಹಾಸ ಹೊಂದಿದ್ದಾರೆ.
ಮಹಾರಾಷ್ಟ್ರದಲ್ಲಿ 21, ರಾಜಸ್ಥಾನದಲ್ಲಿ9, ಕರ್ನಾಟಕದಲ್ಲಿ 3, ಕೇರಳ, ಆಂಧ್ರಪ್ರದೇಶ, ದೆಹಲಿ ಮತ್ತು ಚಂಡೀಗಢದಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ.
ಮಹಾರಾಷ್ಟ್ರದಲ್ಲಿ ಸೋಂಕು ಪತ್ತೆಯಾಗಿರುವವರಿಗೆ ಯಾವುದೇ ಲಕ್ಷಣಗಳಿಲ್ಲ ಮತ್ತು ಇಬ್ಬರೂ ಎರಡು ಡೋಸ್ ಲಸಿಕೆ ಪಡೆದಿದ್ದಾರೆ.
ಪುಣೆಯ 39 ವರ್ಷದ ಮಹಿಳೆ ಹಾಗೂ ಲಾತೂರ್‌ನ 33 ವರ್ಷದ ಪುರುಷನಿಗೆ ಸೋಂಕು ಪತ್ತೆಯಾಗಿದೆ. ಇವರಿಬ್ಬರೂ ದುಬೈನಿಂದ ಇತ್ತೀಚೆಗಷ್ಟೇ ಹಿಂದಿರುಗಿದ್ದರು. ಇವರ ಸಂಪರ್ಕಕ್ಕೆ ಬಂದ ಎಲ್ಲರನ್ನೂ ಪರೀಕ್ಷೆಗೊಳಪಡಿಸಲಾಗಿದೆ. ಅವರ ವರದಿ ಕೂಡ ನೆಗೆಟಿವ್ ಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗ್ರಾ.ಪಂ.ಉಪ ಚುನಾವಣೆ; ವೇಳಾ ಪಟ್ಟಿ ಪ್ರಕಟ