Select Your Language

Notifications

webdunia
webdunia
webdunia
webdunia

ಮಹದೇವಪುರ, ರಾಜಾಜಿನಗರದಲ್ಲಿ ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿಯಲ್ಲಿ ಸಾಕ್ಷಿಯಿದೆ: ಸಿದ್ದರಾಮಯ್ಯ

Mahadevapura and Rajajinagar Election Scam

Sampriya

ಬೆಂಗಳೂರು , ಗುರುವಾರ, 31 ಜುಲೈ 2025 (16:03 IST)
Photo Credit X
ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಳಿ ಸಾಕ್ಷಿಯಿದೆ' ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಈ ಸಂಬಂಧ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಿದ್ದರಾಮಯ್ಯ ಹಂಚಿಕೊಂಡ ಪೋಸ್ಟ್‌ನಲ್ಲಿ ಹೀಗಿದೆ: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ  
ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್‌ ಗಾಂಧಿ ಅವರ ಬಳಿ ಸಾಕ್ಷಿ ಇದೆ. ಹಾಗಾಗಿ ಅವರು ಆಗಸ್ಟ್ 05ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಂಡು, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ. 

'ಆಗಸ್ಟ್ 05ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದು, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ' ಎಂದು ಅವರು ತಿಳಿಸಿದ್ದಾರೆ.

ರಾಹುಲ್ ಗಾಂಧಿ ಹೇಳಿಕೆ ಹೀಗಿದೆ: 
ಕರ್ನಾಟಕದ ಲೋಕಸಭಾ ಕ್ಷೇತ್ರವೊಂದರಲ್ಲಿ ದೊಡ್ಡ ಪ್ರಮಾಣದಲ್ಲಿ ಚುನಾವಣಾ ಅಕ್ರಮ ನಡೆದಿದೆ. ಈ ಭಯಂಕರ ಮತ ಕಳ್ಳತನದ ‘ಕಾರ್ಯ ವಿಧಾನ’ವನ್ನು ಶೀಘ್ರದಲ್ಲೇ ಯಥಾವತ್ತಾಗಿ ಚುನಾವಣಾ ಆಯೋಗ ಮತ್ತು ಜನರ ಮುಂದಿಡುತ್ತೇವೆ' ಎಂದು ಹೇಳಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರಮೋದ್ ಮುತಾಲಿಕ್ ಜತೆ ಕಾಣಿಸಿಕೊಂಡ ನಯನಾ ಮೋಟಮ್ಮ, ಕುತೂಹಲ ಕೆರಳಿಸಿದ ಶಾಸಕಿ ನಡೆ