Select Your Language

Notifications

webdunia
webdunia
webdunia
webdunia

ಮಹೇಶ್ ಕುಮಟಳ್ಳಿಗೆ ಎಂ.ಎಸ್.ಐ.ಎಲ್. ಅಧ್ಯಕ್ಷ ಸ್ಥಾನ ನೀಡಿದ ಸಿಎಂ

ಮಹೇಶ್ ಕುಮಟಳ್ಳಿಗೆ ಎಂ.ಎಸ್.ಐ.ಎಲ್. ಅಧ್ಯಕ್ಷ ಸ್ಥಾನ ನೀಡಿದ  ಸಿಎಂ
ಬೆಂಗಳೂರು , ಮಂಗಳವಾರ, 11 ಫೆಬ್ರವರಿ 2020 (08:56 IST)
ಬೆಂಗಳೂರು : ಸಚಿವ ಸ್ಥಾನದಿಂದ ವಂಚಿತರಾದ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್(MSIL) ನಿರ್ದೇಶಕ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.

ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರದ ಅಳಿವಿಗೆ ಕಾರಣರಾಗಿ ಎಂ.ಎಸ್.ಐ.ಎಲ್. ನಿಗಮ ಮಂಡಳಿ ಅಧ್ಯಕ್ಷ ಉಪಚುನಾವಣೆಯಲ್ಲಿ ಗೆದ್ದ 11 ಮಂದಿ ಶಾಸಕರಲ್ಲಿ 10 ಮಂದಿಗೆ ಸಿಎಂ ಯಡಿಯೂರಪ್ಪ ಸಚಿವ ಸ್ಥಾನ ನೀಡಿದ್ದರು. ಆದರೆ ಅದರಲ್ಲಿ ಮಹೇಶ್ ಕುಮಟಳ್ಳಿ ಹೆಸರು ಕೈಬಿಡಲಾಗಿತ್ತು. ಆದರೆ ಇದೀಗ ಮಹೇಶ್ ಕುಮಟಳ್ಳಿ   ಅವರನ್ನು ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಎಂ.ಎಸ್.ಐ.ಎಲ್. ನ ನಿರ್ದೇಶಕ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

ಈ ಬಗ್ಗೆ ಮಾತನಾಡಿದ ಮಹೇಶ್ ಕುಮಟಳ್ಳಿ, ಸಿಎಂ ನನಗೆ ಸ್ಥಾನ ನೀಡಿದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ ಎಂ.ಎಸ್.ಐ.ಎಲ್. ಅಧ್ಯಕ್ಷ ಸ್ಥಾನ ನನಗೆ ಬೇಡ ಎಂದು ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ತೂಕ ಇಳಿಸಲು ಹೋಗಿ ಜೀವ ಕಳೆದುಕೊಂಡ ಯುವತಿ