Select Your Language

Notifications

webdunia
webdunia
webdunia
webdunia

ಮಹಿಳಾ ಆಯೋಗ ಸ್ವಯಂ ಪ್ರಕರಣ

ಮಹಿಳಾ ಆಯೋಗ ಸ್ವಯಂ ಪ್ರಕರಣ
ಬೆಂಗಳೂರು , ಮಂಗಳವಾರ, 8 ಫೆಬ್ರವರಿ 2022 (14:22 IST)
ಬಿಜೆಪಿ ಶಾಸಕನ ಬ್ಲಾಕ್‍ಮೇಲ್ ಪ್ರಕರಣ ಸಂಬಂಧ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಶಾಸಕ ರಾಜ್‍ಕುಮಾರ್ ವಿರುದ್ಧ 40 ವರ್ಷದ ಮಹಿಳೆ ಕಿರುಕುಳ ಆರೋಪ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಿ ನಾವು ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ತಿಳಿಸಿದ್ದಾರೆ.
ಶಾಸಕರ ವಿರುದ್ಧ ದೂರು ನೀಡಿರುವ ಮಹಿಳೆಗೆ ರಕ್ಷಣೆ ನೀಡುವಂತೆ ಪೊಲೀಸರಿಗೆ ಸೂಚಿಸಿದ್ದೇವೆ. ಈ ಕುರಿತಂತೆ ನಾನು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿದರು. ಇನ್ನೂ ರಾಜ್‍ಕುಮಾರ್ ಅವರು ನನಗೆ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ಥ ಮಹಿಳೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ದೂರು ನೀಡಿದ್ದಾರೆ. ಹೀಗಾಗಿ ನಾನು ಶೀಘ್ರ ಪಂತ್ ಅವರನ್ನು ಭೇಟಿಯಾಗಿ ಮಹಿಳೆ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಳ್ಳುತ್ತೇನೆ ಎಂದು ಪ್ರಮೀಳಾನಾಯ್ಡು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

100 ರೂ.ಗಾಗಿ ಸಂಬಂಧಿಕನ ಕೊಲೆ ಮಾಡಿ ಮೃತದೇಹ ಸುಟ್ಟು ಹಾಕಿದ ಭೂಪ!