ರಾಜ್ಯ ಸರಕಾರ ಆಯೋಜಿತ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ವೇಳೆ ಯುವತಿಯರ ಅರೆನಗ್ನ ಚಿತ್ರ ವೀಕ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ವೀರ್ ಸೇಠ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆ ಮಂಜುಳಾ ಒತ್ತಾಯಿಸಿದ್ದಾರೆ.
ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ವೇಳೆ ಯುವತಿಯರ ಅರೆನಗ್ನ ಚಿತ್ರ ವೀಕ್ಷಣೆ ಮಾಡಿರುವ ಆರೋಪ ಎದುರಿಸುತ್ತಿರುವ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಸಚಿವ ಸಂಪುಟದಿಂದ ಕೈಬಿಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರನ್ನು ಒತ್ತಾಯಿಸಿದ್ದಾರೆ.
ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಕಟ್ಟಿದ ಪಕ್ಷದಲ್ಲಿ ಇಂತಹ ಘಟನೆ ನಡೆದಿದೆ. ಇದಕ್ಕೆ ಕಾರಣರಾಗಿರುವ ಶಿಕ್ಷಣ ಸಚಿವ ತನ್ವೀರ್ ಸೇಠ್ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆ ಮಂಜುಳಾ ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ