ಟಿಕ್ ಟಾಕ್‌ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಸ್ಟಾರ್‌ಗಳಾಗಿದ್ದ ಪ್ರೇಮಿ

Webdunia
ಸೋಮವಾರ, 22 ನವೆಂಬರ್ 2021 (21:37 IST)
ಬೆಂಗಳೂರು: ಟಿಕ್ ಟಾಕ್‌ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಸ್ಟಾರ್‌ಗಳಾಗಿದ್ದ ಪ್ರೇಮಿಗಳಲ್ಲಿ ಹುಡುಗಿ ಸೋಮವಾರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪ್ರಿಯಕರ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮನೋಜ್‌ (20) ಹಾಗೂ ರಕ್ಷಿತಾ (17) ಮೃತರು.
ಟಿಕ್ ಟಾಕ್ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಿದ್ಧಿಯಾಗಿದ್ದ ರಕ್ಷಿತಾ (17) ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಬೆಂಗಳೂರಿನ ಚಿಕ್ಕಸಂದ್ರದ ವರಮಹಾಲಕ್ಷ್ಮಿ ಮತ್ತು ಕೃಷ್ಣಪ್ಪನವರ ಪುತ್ರಿ ಮೃತ ರಕ್ಷಿತ ಪ್ರತಿಷ್ಠಿತ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈಕೆಯ ಟಿಕ್ ಟಾಕ್‌ ವಿಡಿಯೋಗಳು ಸಖತ್ ವೈರಲ್ ಆಗಿದ್ದವು. ಅಪ್ಪ-ಅಮ್ಮ ಮದುವೆಗೆಂದು ತೆರಳಿದ್ದಾಗ ಈಕೆ ಮನೆಯಲ್ಲಿ ನೇಣಿಗೆ ಶರಣಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.
ಮರಣೋತ್ತರ ಪರೀಕ್ಷೆಗಾಗಿ ಬಾಲಕಿಯ ಮೃತದೇಹವನ್ನು ಸಪ್ತಗಿರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಟಿಕ್ ಟಾಕ್ ವಿಡಿಯೋ ಮಾಡುತ್ತಿದ್ದ ಬಾಲಕಿ ರಕ್ಷಿತಾ ಮತ್ತು ಮನೋಜ್ (20) ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದು ಬಂದಿದೆ.
ತಾನು ಪ್ರೀತಿಸುತ್ತಿದ್ದ ಹುಡುಗಿಯ ಸಾವಿನ ಸುದ್ದಿ ಕೇಳಿ ಆಘಾತಕ್ಕೊಳಗಾದ ಮನೋಜ್‌ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಮೃತ ಯುವಕ ಯಲಹಂಕ ತಾಲೂಕಿನ ಹನಿಯೂರು ಗ್ರಾಮದ ನಿವಾಸಿಯಾಗಿದ್ದಾನೆ. ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಮಾಡಿಸಿದ ಆನೆ, ಚಾರ್ಮಾಡಿಯಲ್ಲಿ ನಿಜವಾಗ್ಲೂ ಆಗಿದ್ದೇನು

Karnataka Weather: ಮುಂದಿನ 24 ಗಂಟೆಯ ಹವಾಮಾನ ಬದಲಾವಣೆ ಕೇಳಿದ್ರೆ ಶಾಕ್

ಮನೆ ಕಟ್ಟೋಣ ಎಂದು ವಿಚ್ಛೇಧಿತ ಮಹಿಳೆಗೆ ಕೈಕೊಟ್ಟ ಎರಡನೇ ಗಂಡ, ಆಗಿದ್ದೇನು ಗೊತ್ತಾ

ಕನ್ನಡ, ಕೇರಳ ಭಾಷಾ ವಿವಾದ: ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಪ್ರೀತಿ ತಿರಸ್ಕರಿಸಿದ ಯುವತಿಗೆ ಪಾಗಲ್ ಪ್ರೇಮಿಯ ಕಾಟ, ಕೊನೆಗೂ ವಶಕ್ಕೆ

ಮುಂದಿನ ಸುದ್ದಿ
Show comments