Select Your Language

Notifications

webdunia
webdunia
webdunia
webdunia

ಮಲೆ ಮಹದೇಶ್ವರ ದೀಪಾವಳಿ ರಥೋತ್ಸವ

ಮಲೆ ಮಹದೇಶ್ವರ ದೀಪಾವಳಿ ರಥೋತ್ಸವ
ಚಾಮರಾಜನಗರ , ಗುರುವಾರ, 27 ಅಕ್ಟೋಬರ್ 2022 (08:37 IST)
ಚಾಮರಾಜನಗರ : ಎಲ್ಲಿ ನೋಡಿದರಲ್ಲಿ ಜನಸಾಗರ, ಉಘೇ, ಉಘೇ ಮಾದಪ್ಪ ಎನ್ನುವ ಜಯಕಾರ, ಕುಣಿದು ಕುಪ್ಪಳಿಸಿ ಭಕ್ತಿಯ ಪರಾಕಾಷ್ಟೆ ಮೆರೆದ ಮಹಿಳೆಯರು, ಈ ಎಲ್ಲ ಸಂಭ್ರಮ ಮಲೆ ಮಹದೇಶ್ವರನ ದೀಪಾವಳಿ ರಥೋತ್ಸವದಲ್ಲಿ ಕಂಡುಬಂದಿದೆ.

ಚಾಮರಾಜನಗರ ಜಿಲ್ಲೆಯಲ್ಲಿರುವ ಮಲೆ ಮಹದೇಶ್ವರ ಬೆಟ್ಟ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ. ಬೆಟ್ಟದಲ್ಲಿ ನೆಲಸಿರುವ ಮಲೆಮಾದಪ್ಪ ಲಕ್ಷಾಂತರ ಭಕ್ತರ ಆರಾಧ್ಯ ದೈವ.

ಈ ಬೆಟ್ಟದಲ್ಲಿ ವರ್ಷಕ್ಕೆ ಒಂದಲ್ಲ, ಎರಡಲ್ಲ, ಮೂರು ಬಾರಿ ಅಂದರೆ ಶಿವರಾತ್ರಿ, ಯುಗಾದಿ ಹಾಗೂ ದೀಪಾವಳಿಯಂದು ರಥೋತ್ಸವ ನಡೆಯುತ್ತದೆ. ಇದೇ ರೀತಿ ಈ ಬಾರಿಯು ಬೆಟ್ಟದಲ್ಲಿಂದು ಮಾದಪ್ಪನ ದೀಪಾವಳಿ ರಥೋತ್ಸವ ಲಕ್ಷಾಂತರ ಭಕ್ತರ ಜಯಘೋಷಗಳ ನಡುವೆ ಸಂಭ್ರಮ ಸಡಗರಗಳೊಂದಿಗೆ ನಡೆಯಿತು.  


Share this Story:

Follow Webdunia kannada

ಮುಂದಿನ ಸುದ್ದಿ

ತಲೆಗೆ ಇಟ್ಟಿಗೆಯಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ!