Publish Date: Tue, 29 Oct 2019 (20:03 IST)
Updated Date: Tue, 29 Oct 2019 (20:05 IST)
ಪ್ರಸಿದ್ಧವಾದ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು.
ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿವರ್ಷದಂತೆ ಈ ಸಲವೂ ದೀಪಾವಳಿ ಹಬ್ಬದ ಜಾತ್ರಾ ಮಹೋತ್ಸವ ಸಡಗರ, ಸಂಭ್ರಮದಿಂದ ನೆರವೇರಿತು.
ಸಾಲೂರು ಮಠದ ಪಟ್ಟದ ಗುರುಸ್ವಾಮೀಜಿಗಳು ರಥೋತ್ಸವಕ್ಕೆ ಚಾಲನೆ ನೀಡಿದ್ರು. ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಭಕ್ತರು ಕಣ್ತುಂಬಿಕೊಂಡರು.
ಭಕ್ತರ ಆರಾಧ್ಯ ದೈವ ಮಾದಪ್ಪನ ಅಪರಿಮಿತ ಭಕ್ತರು ಉಘೇ ಉಘೇ ಅಂತ ತೇರನ್ನು ಎಳೆದು ಭಕ್ತಿಯ ಪರಾಕಾಷ್ಠೆ ಮೆರೆದು, ಧನ್ಯರಾದರು.