Publish Date: Sun, 17 Dec 2017 (15:11 IST)
Updated Date: Sun, 17 Dec 2017 (15:12 IST)
ಬಿಜೆಪಿಯವರ ಕಿರುಕುಳದಿಂದ ಮಲ್ಲಮ್ಮ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯೋಗೇಶಗೌಡ ಅವರ ಹತ್ಯೆ ಪ್ರಕರಣದ ತನಿಖೆ ಒಂದು ವರ್ಷದಿಂದ ನಡೆದಿದೆ. ಹತ್ಯೆ ಪ್ರಕರಣ ಮುಚ್ಚಿಹಾಕಲು ಮಲ್ಲಮ್ಮ ಅವರ ಮೇಲೆ ಒತ್ತಡ ಹೇರಲಾಗುತ್ತಿದೆ. ಯೋಗೇಶಗೌಡ ಅವರ ಹತ್ಯೆ ಪ್ರಕರಣ ಮುಚ್ಚಿಹಾಕಲು ಪಿತೂರಿ ನಡೆಸಲಾಗಿದೆ ಎಂದು ದೂರಿದ್ದಾರೆ.
ಯೋಗೇಶಗೌಡ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಇಲ್ಲದವಾದರೆ ಮುಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಆಗ ಸಿಬಿಐ ತನಿಖೆಗೆ ವಹಿಸಲಾಗುವುದು. ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸಾಧನೆ ಮಾಡಿದಂತೆ ಬೀಗುತ್ತಿದ್ದಾರೆ. ಇಂದಲ್ಲ ನಾಳೆ ಸತ್ಯ ಹೊರಗೆ ಬರುತ್ತದೆ ಎಂದು ನುಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.