Webdunia - Bharat's app for daily news and videos

Install App

ಪಂಚಭೂತಗಳಲ್ಲಿ ಲೀನರಾದ ಬಂಡೆ ಪತ್ನಿ

Webdunia
ಭಾನುವಾರ, 10 ಜುಲೈ 2016 (10:51 IST)
ಹುತಾತ್ಮ ಸಬ್‌ಇನ್ಸ್‌ಪೆಕ್ಟರ್‌ ಮಲ್ಲಿಕಾರ್ಜುನ ಬಂಡೆ ಅವರ ಪತ್ನಿ ಮಲ್ಲಮ್ಮ ಬಂಡೆ ಅವರ ಅಂತ್ಯಕ್ರಿಯೆಯನ್ನು ಅವರ ಸ್ವಗ್ರಾಮ ಆಳಂದ ತಾಲೂಕಿನ ಖಜೂರಿ ಗ್ರಾಮದಲ್ಲಿ ಶನಿವಾರ ಸಂಜೆ ನೇರವೇರಿಸಲಾಯಿತು.
 
ಪಾರ್ಥಿವ ಶರೀರವನ್ನು ಸ್ವಗ್ರಾಮದಲ್ಲಿ ಒಂದು ಗಂಟೆಗಳ ಕಾಲ ಅಂತಿಮ ದರ್ಶನಕ್ಕಿಡಲಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಜನರು ಮಲ್ಲಮ್ಮ ಅವರ ಅಂತಿಮ ದರ್ಶನ ಪಡೆದರು. 
 
ಹುತಾತ್ಮ ಮಲ್ಲಿಕಾರ್ಜುನ ಬಂಡೆ ಅವರ ಸಮಾಧಿ ಪಕ್ಕದಲ್ಲಿಯೇ ವೀರಶೈವ ಸಾಂಪ್ರದಾಯದಂತೆ  ಮಲ್ಲಮ್ಮ ಬಂಡೆ ಅವರಿಗೆ ಅಂತಿಮ ವಿದಾಯ ಹೇಳಲಾಯಿತು.
 
ಮನೆಮಗನನ್ನು ಕಳೆದುಕೊಂಡ ಬೆನ್ನಲ್ಲೇ ಸೊಸೆಯನ್ನು ಕಳೆದುಕೊಂಡ ಮಲ್ಲಿಕಾರ್ಜುನ್ ಬಂಡೆ ಅವರ ಪೋಷಕರ ಮತ್ತು ಮಲ್ಲಮ್ಮ ತವರಿನವರ ಆಂಕ್ರದನ ಮುಗಿಲು ಮುಟ್ಟಿತ್ತು
 
ಅಂತಿಮ ಸಂಸ್ಕಾರ ಸಮಯದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನರು 'ಭಾರತ ಮಾತಾಕಿ ಜೈ', 'ವಂದೇ ಮಾತರಂ' ಘೋಷಣೆಗಳನ್ನು ಕೂಗಿ ಮಲ್ಲಮ್ಮ ಅವರಿಗೆ ಅಂತಿಮ ವಿದಾಯ ಸಲ್ಲಿಸಿದರು.
 
ಹುತಾತ್ಮ ಪಿಎಸ್ಐ ಮಲ್ಲಿಕಾರ್ಜುನ್ ಬಂಡೆ ಅವರ ಪತ್ನಿ ಮಲ್ಲಮ್ಮ(37) ನಿನ್ನೆ ಮುಂಜಾನೆ 5 ಗಂಟೆ ಸುಮಾರಿಗೆ ಕಲಬುರ್ಗಿಯ ಸೂರ್ಯನಗರದಲ್ಲಿರುವ ತಮ್ಮ ಸಹೋದರಿಯ ಮನೆಯಲ್ಲಿ ಕೊನೆಯುಸಿರೆಳೆದಿದ್ದರು. ಅವರು ದೀರ್ಘಕಾಲದಿಂದ ಮೆದುಳು ಕಾನ್ಸರ್‌ನಿಂದ ಬಳಲುತ್ತಿದ್ದರು. ಸಬ್‌ಇನ್ಸ್‌ಪೆಕ್ಟರ್‌ ಮಲ್ಲಿಕಾರ್ಜುನ ಬಂಡೆ 2014ರ ಜನವರಿ 14ರಂದು ರೌಡಿ ಮುನ್ನಾ ಬಂಧನ ಕಾರ್ಯಾಚರಣೆ ವೇಳೆ ಗುಂಡೇಟಿಗೆ ಬಲಿಯಾಗಿದ್ದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments