ಮೊದಲ ಬಾರಿ ಶಾಸಸಕರಾದವರಿಗೆ ಸಚಿವ ಸ್ಥಾನ ನೀಡುವ ಸಂಪ್ರದಾಯ ಕಾಂಗ್ರೆಸ್ ಪಕ್ಷದಲ್ಲಿಲ್ಲ. ಆದರೆ, ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮ್ಯಾಚ್‌ಫಿಕ್ಸಿಂಗ್ ಮಾಡಿಕೊಂಡು ಪ್ರಮೋದ ಮದ್ವರಾಜ್, ಪ್ರಿಯಾಂಕಾ ಖರ್ಗೆಗೆ ಸಚಿವ ಸ್ಥಾನ ನೀಡಿದ್ದಾರೆ ಎಂದು ಸಮಾನ ಮನಸ್ಕ ವೇದಿಕೆ ಅಧ್ಯಕ್ಷ ಶಾಸಕ ಎಸ್.ಟಿ.ಸೋಮಶೇಖರ್ ಗಂಬೀರ ಆರೋಪ ಮಾಡಿದ್ದಾರೆ.
ಬೆಂಗಳೂರು ಮೂಲದ ಶಾಸಕರು ಸಭೆ ಸೇರಿ ಒಂದೆರೆಡು ದಿನಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಇನ್ನೂ ಹಲವು ಶಾಸಕರು ರಾಜೀನಾಮೆ ನೀಡುವ ಚಿಂತನೆಯಲ್ಲಿದ್ದಾರೆ ಎಂದು ಸೋಮಶೇಖರ್ ತಿಳಿಸಿದ್ದಾರೆ
ಕಾಂಗ್ರೆಸ್‌ನಲ್ಲಿ ಅಸಮಧಾನ ಹೊಗೆಯಾಡುತ್ತಿದೆ. ಮುಂಬರುವ ದಿನಗಳಲ್ಲಿ ಬಿರುಗಾಳಿಯಾಗಿ ಬೀಸಲಿದೆ ಎಂದು ಸಮಾನ ಮನಸ್ಕ ವೇದಿಕೆ ಅಧ್ಯಕ್ಷ ಶಾಸಕ ಎಸ್.ಟಿ.ಸೋಮಶೇಖರ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ