Select Your Language

Notifications

webdunia
webdunia
webdunia
webdunia

ಅಧಿಕಾರ ಹಂಚಿಕೆ ಬಗ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mallikarjun Kharge-DK Shivakumar-Siddaramaiah
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ನಡೆಯುತ್ತಿರುವ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಒಂದನ್ನು ಕೊಟ್ಟಿದ್ದಾರೆ.

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ನಡೆಯುತ್ತಿದೆ ಎನ್ನಲಾಗಿರುವ ಸಿಎಂ ಕುರ್ಚಿ ತಿಕ್ಕಾಟ ಈಗ ಹೈಕಮಾಂಡ್ ಅಂಗಳಕ್ಕೆ ಬಂದಿದೆ. ಇದರ ಬಗ್ಗೆ ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬ ಕುತೂಹಲ ಈಗ ಎಲ್ಲರದ್ದು.

ಇದರ ನಡುವೆ ಇಂದು ಮಲ್ಲಿಕಾರ್ಜುನ ಖರ್ಗೆ ಮಾಧ್ಯಮಗಳ ಮುಂದೆ ಅಧಿಕಾರ ಹಂಚಿಕೆ ಬಗ್ಗೆ ಮಹತ್ವದ ಅಪ್ ಡೇಟ್ ಕೊಟ್ಟಿದ್ದಾರೆ. ಇಂದು ದೆಹಲಿಗೆ ತೆರಳಿರುವ ಮಲ್ಲಿಕಾರ್ಜುನ ಖರ್ಗೆ ಅದಕ್ಕೆ ಮೊದಲು ಮಾಧ್ಯಮಗಳ ಮುಂದೆ ಮಾತನಾಡಿದ್ದು, ಸಿಎಂ, ಡಿಸಿಎಂ ಸೇರಿದಂತೆ ಪ್ರಮುಖ ಮೂರು-ನಾಲ್ಕು ನಾಯಕರನ್ನು ದೆಹಲಿಗೆ ಕರೆಸಿ ಮಾತನಾಡುತ್ತೇವೆ. ನಮ್ಮ ಹೈಕಮಾಂಡ್ ಎಂದರೆ ಏಕಾಂಗಿ ಅಲ್ಲ. ಇದು ಒಂದು ತಂಡ. ಅಲ್ಲಿ ರಾಹುಲ್ ಗಾಂಧಿ ಕೂಡಾ ಇರುತ್ತಾರೆ. ಎಲ್ಲರೂ ಕೂತು ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರುತ್ತೇವೆ. ಸಿಎಂ ಕುರ್ಚಿಗಾಗಿ ಬಿಕ್ಕಟ್ಟು ಸೃಷ್ಟಿಯಾಗಿದೆ ಎಂಬುದೆಲ್ಲಾ ಮಾಧ್ಯಮಗಳ ಸೃಷ್ಟಿ ಎಂದು ಅವರು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

20 ರೂ ಇದ್ದ ಟೊಮೆಟೊ ದರ ದಿಡೀರ್ ಏರಿಕೆ: ಎಷ್ಟಾಗಿದೆ ನೋಡಿ