ಬೆಂಗಳೂರು: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ಚೇತರಿಸಿಕೊಂಡಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಫೇಸ್ ಮೇಕರ್ ಅಳವಡಿಸುವ ಸಲುವಾಗಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಮೊನ್ನೆಯಷ್ಟೇ ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದರು. ಖರ್ಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೇ ಪ್ರಧಾನಿ ಮೋದಿ ಸೇರಿದಂತೆ ರಾಜಕೀಯ ನಾಯಕರು ಅವರ ಆರೋಗ್ಯ ವಿಚಾರಿಸಿದ್ದರು.
ಇದೀಗ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಕೆಲವು ದಿನ ಅವರು ವಿಶ್ರಾಂತಿ ಪಡೆಯಲಿದ್ದು ಬಳಿಕ ರಾಜಕೀಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು, ತಮಗೆ ಅನಾರೋಗ್ಯವಾಗಿದ್ದಾಗ ಶುಭ ಹಾರೈಸಿದ ಎಲ್ಲರಿಗೂ ಮಲ್ಲಿಕಾರ್ಜುನ ಖರ್ಗೆ ಧನ್ಯವಾದ ಸಲ್ಲಿಸಿದ್ದಾರೆ. ಶೀಘ್ರದಲ್ಲೇ ನನ್ನ ಕೆಲಸ ಕಾರ್ಯಗಳಿಗೆ ಮರಳುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.