Publish Date: Thu, 04 Apr 2019 (17:23 IST)
Updated Date: Thu, 04 Apr 2019 (17:25 IST)
ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಇಂದು ನಾಮಪತ್ರ ಸಲ್ಲಿಸಿದ್ರು. ಕಲಬುರ್ಗಿಯಲ್ಲಿ ಕಾಂಗ್ರೆಸ್ ನಿಂದ ಶಕ್ತಿ ಪ್ರದರ್ಶನ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್ ರೋಡ್ ಶೋ ನಡೆಯಿತು. ನಾಮಪತ್ರ ಸಲ್ಲಿಕೆಗೂ ಮೊದಲು ಬೃಹತ್ ರೋಡ್ ಶೋ ನಡೆಸಲಾಯಿತು. ಕಲಬುರಗಿ ನಗರದ ನಗರೇಶ್ವರ ಶಾಲೆಯಿಂದ ಡಿಸಿ ಕಚೇರಿವರೆಗೆ ಬೃಹತ್ ರ್ಯಾಲಿ ನಡೆಯಿತು.
ಕಾಂಗ್ರೆಸ್ ನಿಂದ ರ್ಯಾಲಿಗೆ ಸಾವಿರಾರು ಜನರನ್ನು ಸೇರಿಸುವ ಪ್ಲಾನ್ ರೂಪಿಸಿ ಅದರಲ್ಲಿ ಯಶಸ್ವಿಯಾಯಿತು. ನಿನ್ನೆ ಬಿಜೆಪಿ ರ್ಯಾಲಿ ಮಾಡಿತ್ತು. ರ್ಯಾಲಿಗೆ ಸಾವಿರಾರು ಜನರನ್ನು ಕರೆತಂದು ಬಿಜೆಪಿ ಶಕ್ತಿ ಪ್ರದರ್ಶನ ಮಾಡಿತ್ತು. ಇಂದು ಬಿಜೆಪಿಗೆ ಕಾಂಗ್ರೆಸ್ ಟಾಂಗ್ ನೀಡಿದೆ.