Webdunia - Bharat's app for daily news and videos

Install App

ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕಾಗಿತ್ತು: ಮನದಾಳ ಹೊರಹಾಕಿದ ಜಿ. ಪರಮೇಶ್ವರ್

Webdunia
ಬುಧವಾರ, 20 ಜುಲೈ 2016 (15:23 IST)
ಕೇಂದ್ರ ಸಂಸದೀಯ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾಗಬೇಕಿತ್ತು ಎಂದು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್, ಕೇಂದ್ರ ಸಂಸದೀಯ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ರಾಜಕೀಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮಾರ್ಗವನ್ನು ಅನುಸುರಿಸುತ್ತಾ ಬಂದವರು. ನಾವು ಸಹ ರಾಜಕೀಯದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಅನುಸರಿಸುತ್ತಾ ಬಂದಿದ್ದೇವೆ ಎಂದು ತಿಳಿಸಿದರು.
 
ಮಲ್ಲಿಕಾರ್ಜುನ ಖರ್ಗೆ ಅವರು ಯಾವತ್ತೋ ರಾಜ್ಯದ ಮುಖ್ಯಮಂತ್ರಿಯಾಗಬೇಕಿತ್ತು. ಅವರಿಗೆ ರಾಜ್ಯದ ಮುಖ್ಯಮಂತ್ರಿಯಾಗಲು ಹಲವು ಅವಕಾಶಗಳು ಬಂದಿದ್ದು, ಕೈತಪ್ಪಿ ಹೋಗಿದೆ. ಆದರೆ, ಅವರು ಎಂದು ಬೇಸರ ಮಾಡಿಕೊಳ್ಳಲಿಲ್ಲ. ಬದಲಾಗಿ ಅವರಿಗೆ ನೀಡಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಿದ್ದಾರೆ ಎಂದು ತಿಳಿಸಿದರು.
 
ಪ್ರಸ್ತುತವಾಗಿ ರಾಜಕೀಯ ತುಂಬಾ ಬದಲಾಗಿದೆ. ರಾಜಕಾರಣದ ಮೌಲ್ಯ ಕುಸಿಯುತ್ತಿದೆ ಎಂದು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದೇಶಭಕ್ತ ಅದಕ್ಕೇ ಸೂಸೈಡ್ ಬಾಂಬ್ ಕಟ್ಟಿಕೊಂಡು ಯುದ್ಧಕ್ಕೆ ಹೋಗ್ತೀನಿ ಎಂದೆ: ಜಮೀರ್ ಅಹ್ಮದ್

ಮಗಳ ನಿಶ್ಚಿತಾರ್ಥ ಮುಗಿಸಿ ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ಅಪಘಾತ: ವಧು ಸೇರಿದಂತೆ ಐವರು ಸಾವು

ಪ್ರಧಾನಿ ಮೋದಿ ಜಮ್ಮು ಕಾಶ್ಮೀರ ಭೇಟಿ ರದ್ದಿಗೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ

ಗುಜರಾತ್‌: ರಾಜ್ಯದಲ್ಲಿ ಸುರಿದ ಭಾರೀ ಮಳೆಗೆ 14ಸಾವು, ಭಾರೀ ಹಾನಿ

Viral video: ಚಪಲ ಚೆನ್ನಿಗರಾಯ ವೃದ್ಧ.. ಬಿಎಂಟಿಸಿ ಬಸ್ ನಲ್ಲಿ ಮಹಿಳೆಗೆ ಮಾಡಿದ್ದೇನು

ಮುಂದಿನ ಸುದ್ದಿ
Show comments