ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಪುತ್ರ ಮಿಲಿಂದ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಮಲ್ಲಿಕಾರ್ಜುನ ಖರ್ಗೆ ಪುತ್ರ ಮಿಲಿಂದ್ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಾರೆ. ವಿದೇಶದಲ್ಲಿ ಎಂಬಿಎ ಪದವಿ ಮುಗಿಸಿದ್ದ ಅವರು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಪ್ರಿಯಾಂಕ್ ಖರ್ಗೆಯಂತೆ ಅವರು ರಾಜಕೀಯದಲ್ಲಿಲ್ಲ. ರಾಜಕೀಯದಿಂದ ದೂರವೇ ಉಳಿದಿದ್ದಾರೆ.
ಕ್ಯಾನ್ಸರ್ ನಿಂದ ಬಳಲುತ್ತಿರುವ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಅವರನ್ನು ಐಸಿಯುವಿನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಸಕ್ರಾ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಿಯಾಂಕ್ ಖರ್ಗೆ ಹಿರಿಯ ಪುತ್ರನಾಗಿದ್ದರೆ ಮಿಲಿಂದ್ ಖರ್ಗೆಯವರ ಕಿರಿಯ ಪುತ್ರರಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಮೂವರು ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದಾರೆ.