Publish Date: Fri, 29 Sep 2017 (14:01 IST)
Updated Date: Fri, 29 Sep 2017 (14:04 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ನಾನೇ ಮುಂದಿನ ಸಿಎಂ ಎಂದು ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಸಿಎಂ ಸಿದ್ದರಾಮಯ್ಯನವರೇ ನಮ್ಮ ಕ್ಯಾಪ್ಟನ್. ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲಿಯೇ ನಡೆಯಲಿದೆ ಎಂದು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಜನಪರ ಅಡಳಿತ ನೀಡುತ್ತಿರುವುದರಿಂದ ಮುಂದೆಯೂ ನಾನೇ ಸಿಎಂ ಎಂದು ಹೇಳುತ್ತಿದ್ದಾರೆ. ಹಾಗೇ ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡರು.
ಚುನಾವಣೆಗೆ ಕೆಲವೇ ಕೆಲ ತಿಂಗಳುಗಳಿರುವಾಗ ಸರಕಾರದ ವಿರುದ್ಧ ಟೀಕೆ ಟಿಪ್ಪಣಿಗಳನ್ನು ನೀಡುವುದು ಸರಿಯಲ್ಲ ಎಂದು ಕಾಂಗ್ರೆಸ್ ಶಾಸಕ ಕೆ.ಎನ್.ರಾಜಣ್ಣ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್ ಷರೀಫ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.