ಹೊಸಪೇಟೆ: ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಯಶಸ್ಸಿನ ಸಂಭ್ರಮಾಚರಣೆಗಾಗಿ ನಿನ್ನೆ ಆಯೋಜಿಸಲಾಗಿದ್ದ ಸಮರ್ಪಣಾ ಸಂಕಲ್ಪ ಸಮಾವೇಶದಲ್ಲಿ ಭಾಷಣ ಮಾಡುವಾಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಮ್ಮ ಪಾಕಿಸ್ತಾನ ಎಂದಿದ್ದಕ್ಕೆ ಈಗ ಭಾರೀ ಟ್ರೋಲ್ ಆಗಿದ್ದಾರೆ.
ಹೊಸಪೇಟೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ಘಟಾನುಘಟಿ ನಾಯಕರೆಲ್ಲಾ ಬಂದಿದ್ದರು. ಕಾರ್ಯಕ್ರಮದಲ್ಲಿ ಮಾತನಾಡುವಾಗ ಖರ್ಗೆ ಎಡವಟ್ಟು ಮಾಡಿದ್ದಾರೆ.
ಇತ್ತೀಚೆಗೆ ನಡೆದ ಆಪರೇಷನ್ ಸಿಂಧೂರ್ ಮತ್ತು ಪಹಲ್ಗಾಮ್ ದಾಳಿ ಬಗ್ಗೆ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ಟೀಕಿಸುವ ಭರದಲ್ಲಿ ಪಾಕಿಸ್ತಾನವನ್ನು ನಮ್ಮ ಪಾಕಿಸ್ತಾನ ಎಂದಿದ್ದಾರೆ. ಇದನ್ನೇ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು ಅಂತೂ ಪಾಕಿಸ್ತಾನದ ಮೇಲಿನ ಪ್ರೇಮವನ್ನು ಖರ್ಗೆ ಬಹಿರಂಗವಾಗಿಯೇ ಹೇಳಿಕೊಂಡರು ಎಂದು ಟ್ರೋಲ್ ಮಾಡಿದ್ದಾರೆ.
ಅಲ್ಲದೆ ಪಾಕಿಸ್ತಾನದ ಜೊತೆಗಿನ ಯುದ್ಧವನ್ನು ಸಣ್ಣ ಪುಟ್ಟ ಯುದ್ಧ ಎಂದಿದ್ದಾರೆ. ಇದೇ ವಿಚಾರವಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದು, ಖರ್ಗೆಯವರ ಮಾತು ನಿಜಕ್ಕೂ ಶಾಕಿಂಗ್. ಇದು ಕಾಂಗ್ರೆಸ್ ನ ಮನಸ್ಥಿತಿಯನ್ನು ತೋರಿಸುತ್ತದೆ ಎಂದಿದ್ದಾರೆ.