ನವದೆಹಲಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ದಿನಕ್ಕೊಂದು ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿರುವ ಕರ್ನಾಟಕ ನಾಯಕರಿಗೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಏನೇ ಆದರೂ ನಾನು, ರಾಹುಲ್ ಗಾಂಧಿ ತೀರ್ಮಾನಿಸಬೇಕು ಎಂದಿದ್ದಾರೆ.
ಕರ್ನಾಟಕದಲ್ಲಿ ಇತ್ತೀಚೆಗೆ ಡಿನ್ನರ್ ಮೀಟಿಂಗ್, ಸಿಎಂ ಬದಲಾವಣೆ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ತಮ್ಮ ಆಪ್ತ ಸಚಿವರೊಂದಿಗೆ ಕೆಲವು ನಾಯಕರು ಗುಟ್ಟಾಗಿ ಸಭೆ ನಡೆಯುತ್ತಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ.
ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ರಾಜ್ಯ ನಾಯಕರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಬಾಯ್ಮುಚ್ಚಿಕೊಂಡಿರಿ, ರಾಜ್ಯದಲ್ಲಿ ಯಾವುದೇ ಹುದ್ದೆ ಬದಲಾವಣೆಯಾಗಬೇಕಿದ್ದರೋ ನಾನು ಮತ್ತು ರಾಹುಲ್ ಗಾಂಧಿ ತೀರ್ಮಾನಿಸಬೇಕು ಎಂದಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಖರ್ಗೆ ಯಾವಾಗ ಸಿಎಂ ಬದಲಾವಣೆ ಮಾಡಬೇಕು, ಡಿಸಿಎಂ ಬದಲಾವಣೆ ಮಾಡಬೇಕು ಎಂದು ನನಗೆ, ರಾಹುಲ್ ಜೀಗೆ ಗೊತ್ತಿದೆ. ಇದನ್ನು ತೀರ್ಮಾನಿಸಲು ನಾನು, ರಾಹುಲ್ ಇದ್ದೇವೆ. ಈ ಬಗ್ಗೆ ಅನಗತ್ಯ ಹೇಳಿಕೆಗಳನ್ನು ನೀಡುತ್ತಿದ್ದರೆ ಪಕ್ಷಕ್ಕೆ ಹಾನಿಯಾಗುವುದು ಬಿಟ್ಟರೆ ಬೇರೆ ಏನೂ ಆಗಲ್ಲ. ಕಾಂಗ್ರೆಸ್ ಹೈಕಮಾಂಡ್ ಏನು ಕೆಲಸ ನೀಡಿದೆಯೋ ಮೊದಲು ಅದನ್ನು ಮಾಡಿ ಎಂದು ಖರ್ಗೆ ಬಹಿರಂಗವಾಗಿಯೇ ಎಚ್ಚರಿಕೆ ನೀಡಿದ್ದಾರೆ.