Publish Date: Tue, 02 Jun 2020 (08:11 IST)
Updated Date: Tue, 02 Jun 2020 (08:13 IST)
ಬೆಂಗಳೂರು : ಲಾಕ್ ಡೌನ್ ಸಡಿಲಿಕೆ ಮಾಡಿದ್ದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಕೇಸ್ ಕಡಿಮೆ ಇದ್ದಾಗ ಲಾಕ್ ಡೌನ್ , ಕೊರೊನಾ ಜಾಸ್ತಿ ಆದ ಬಳಿಕ ಲಾಕ್ ಡೌನ್ ಸಡಿಲಿಕೆ ಮಾಡಿದ್ದಾರೆ. ದೇಶದ ಎಲ್ಲ ವರ್ಗದ ಜನರಿಗೆ ತೊಂದರೆ ಮಾಡುವ ಕೆಲಸ ಕೇಂದ್ರ ಮಾಡಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಕೋವಿಡ್ 19 ನಿಂದ ಇಡೀ ದೇಶ ಅಲ್ಲೋಲ ಕಲ್ಲೋಲವಾಗಿದೆ. ಕೂಲಿ ಕಾರ್ಮಿಕರು ತಮ್ಮ ಸಮುದಾಯ ವೃತ್ತಿ ಆದರಿಸಿದವರು ಬಹಳ ತೊಂದರೆಯಲ್ಲಿದ್ದಾರೆ. ಸಣ್ಣ ಕೈಗಾರಿಕೆಗಳು ಮತ್ತು ಅಸಂಘಟಿತ ಕಾರ್ಮಿಕರಿಗೆ ಭಾರೀ ತೊಂದರೆ ಆಗಿದೆ ಎಂದು ಅವರು ತಿಳಿಸಿದ್ದಾರೆ.