Select Your Language

Notifications

webdunia
webdunia
webdunia
webdunia

ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ಬೆಂಗಳೂರು , ಮಂಗಳವಾರ, 25 ಏಪ್ರಿಲ್ 2023 (16:34 IST)
ದುಡ್ಡಿನ ಮೇಲೆ ಬಿಜೆಪಿ ಚುನಾವಣೆ ನಡೆಸುತ್ತಿದೆ. ಅಲ್ಲದೇ ಮನಿ ಮತ್ತು ಮಸಲ್ ಪವರ್ ಬಳಸುತ್ತಿದ್ದಾರೆ. ರಾಜ್ಯದ ಬಜೆಟ್ನಲ್ಲಿ 3 ಲಕ್ಷ ಕೋಟಿ ಹಣ ಇದೆ.
 
ಅದರಲ್ಲಿ 40 ಪರ್ಸೆಂಟ್ ಕಮಿಷನ್ ಹೋಗುತ್ತದೆ. ಅನೇಕ ಎಂಎಲ್ಎಗಳು ಹಾಗೂ ಅವರ ಸಂಬಂಧಿಗಳು ಭ್ರಷ್ಟಾಚಾರ ಮಾಡುತ್ತಿದ್ದಾರೆ. ಈಗ ಅವರ ಬಗಲಲ್ಲೇ ಭ್ರಷ್ಟಾಚಾರ ನಡೆಯುತ್ತಿದ್ದರೂ ಅವರು ಮಾತನಾಡುವುದಿಲ್ಲ. ಒಂಭತ್ತು ವರ್ಷಗಳಲ್ಲಿ ಅವರ ಕೊಡುಗೆ ಏನಿದೆ ಎಂದು ಪ್ರಶ್ನಿಸಿದರು. 

40% ಕಮಿಷನ್ ಕೊಟ್ಟರೆ ಎಲ್ಲಾ ಕೆಲಸ ಆಗುತ್ತದೆ ಎನ್ನುವುದು ಜಗತ್ತಿಗೇ ಗೊತ್ತಾಗಿದೆ. ಇದಕ್ಕೆ ನಾವು ಸಾಕ್ಷಿ ಕೊಡಬೇಕಾಗಿಲ್ಲ. ಕರ್ನಾಟಕದಲ್ಲಿದ್ದ ಕಾಂಟ್ರಾಕ್ಟರ್ ಸೇರಿದಂತೆ ಎಲ್ಲರೂ ಬರವಣಿಗೆಯ ರೂಪದಲ್ಲಿ ಪ್ರಧಾನಿ, ರಾಷ್ಟ್ರಪತಿ, ರಾಜ್ಯಪಾಲ ಹಾಗೂ ಲೋಕಾಯುಕ್ತರಿಗೆ ಕಳುಹಿಸಿದ್ದಾರೆ. ಇಂತಹ ಭ್ರಷ್ಟಾಚಾರದ ಸರ್ಕಾರ ಇರುವುದರಿಂದ ಇದನ್ನು ತೆಗೆದು ಹಾಕಲು ಜನರು ನಿರ್ಧರಿಸಿದ್ದಾರೆ ಎಂದು ಕಿಡಿಕಾರಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ 10 ಪರ್ಸೆಂಟ್ ಕೆಲಸ ಮಾಡಿದ್ರೆ ವೋಟ್ ಕೇಳೋ ಅವಶ್ಯತೆ ಇರ್ತಿರಲಿಲ್ಲ : ಅಮಿತ್ ಶಾ