Publish Date: Tue, 15 Aug 2017 (15:23 IST)
Updated Date: Tue, 15 Aug 2017 (15:25 IST)
ರಾಜ್ಯ ಪ್ರವಾಸದ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಕಾಂಗ್ರೆಸ್`ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ನಾನು 50 ವರ್ಷದಿಂದ ರಾಜಕೀಯದಲ್ಲಿದ್ದೇನೆ. ಅಮಿತ್ ಶಾ ಕೇವಲ 25 ವರ್ಷದ ಹಿಂದೆ ರಾಜಕೀಯಕ್ಕೆ ಬಂದವರು. ಭ್ರಚ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ, ಭ್ರಷ್ಟರನ್ನ ಕೂರಿಸಿಕೊಂಡು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಬಿಜೆಪಿಯವರ ಹಾಗೆ ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿ ಬಂದವರು ನಮ್ಮ ಪಕ್ಷದಲ್ಲಿಲ್ಲ ಎಂದು ಕಲಬುರಗಿಯಲ್ಲಿ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಅಮಿತ್ ಶಾ ರಾಜಕೀಯ ಉದ್ದೇಶದಿಂದ ಇಲ್ಲದಲ್ಲದ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ಸ್ವಚ್ಛ ಆಡಳಿತ ನೀಡುತ್ತಿದೆ. ಬಿಜೆಪಿ ದೇಶದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದೆ.ಎಂದು ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ