Publish Date: Tue, 26 May 2026 (08:36 IST)
Updated Date: Tue, 26 May 2026 (08:40 IST)
ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆ ವಿಚಾರದಲ್ಲಿ ನನ್ನದೇನೂ ಇಲ್ಲ, ಎಲ್ಲಾ ರಾಹುಲ್ ಜೀ ನೋಡಿಕೊಳ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದು, ಇಂದು ನಾಯಕತ್ವ ಬದಲಾವಣೆ ವಿಚಾರ ಕ್ಲೈಮ್ಯಾಕ್ಸ್ ಹಂತ ತಲುಪುವ ನಿರೀಕ್ಷೆಯಿದೆ.
ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಬಳಿಕ ಈಗ ದೆಹಲಿಯಲ್ಲಿ ಕರ್ನಾಟಕ ಸಿಎಂ ಬದಲಾವಣೆ ವಿಚಾರವಾಗಿ ಚರ್ಚಿಸಲು ಸಿಎಂ ಸಿದ್ದರಾಮಯ್ಯು ಮತ್ತು ಡಿಕೆ ಶಿವಕುಮಾರ್ ಅವರಿಗೆ ಹೈಕಮಾಂಡ್ ನಾಯಕರು ಬುಲಾವ್ ನೀಡಿದ್ದಾರೆ. ಅದರಂತೆ ಸಿದ್ದರಾಮಯ್ಯ ತಮ್ಮ ಬೆಂಬಲಿಗರೊಂದಿಗೆ ಮತ್ತು ಡಿಕೆ ಶಿವಕುಮಾರ್ ತಮ್ಮ ಆಪ್ತರೊಂದಿಗೆ ಪ್ರತ್ಯೇಕ ವಿಮಾನಗಳಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಈ ನಡುವೆ ಕರ್ನಾಟಕದ ಸಿಎಂ ಬದಲಾವಣೆ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಪತ್ರಕರ್ತರು ಮಲ್ಲಿಕಾರ್ಜುನ ಖರ್ಗೆ ಬಳಿ ನಾಯಕತ್ವ ಬದಲಾವಣೆ ವಿಚಾರ ಪ್ರಶ್ನೆ ಮಾಡಿದ್ದು ಇದಕ್ಕೆ ಉತ್ತರಿಸಿದ್ದ ಅವರು ಎಲ್ಲವನ್ನೂ ರಾಹುಲ್ ಜೀ ನಿರ್ಧರಿಸುತ್ತಾರೆ ಎಂದಿದ್ದಾರೆ.
ಇಂದು ಕರ್ನಾಟಕದ ನಾಯಕರು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಜೊತೆ ಮಾತುಕತೆ ನಡೆಸಲಿದ್ದಾರೆ. ಇದಕ್ಕಾಗಿ ತಮ್ಮ ಪರ ಬ್ಯಾಟಿಂಗ್ ಮಾಡಲು ಸಿದ್ದು-ಡಿಕೆಶಿ ತಮ್ಮ ಬಣದ ನಾಯಕರನ್ನು ಜೊತೆಗೇ ಕರೆದೊಯ್ದಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಿಎಂ ಬದಲಾವಣೆ ವಿಚಾರವಾಗಿ ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎನ್ನುವುದು ಸದ್ಯದ ಕುತೂಹಲವಾಗಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ