Publish Date: Mon, 08 Feb 2021 (09:34 IST)
Updated Date: Mon, 08 Feb 2021 (09:36 IST)
ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಮೇಲೆ ಪಾಗಲ್ ಪ್ರೇಮಿಯೊಬ್ಬ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಈ ಸಂಬಂಧ ಆರೋಪಿ ದೀಪಕ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಹಿಂದೆ ಬಿದ್ದು, ಪ್ರೀತಿಸುವಂತೆ ಕಾಟ ಕೊಡುತ್ತಿದ್ದ. ಈತನ ಕಾಟ ತಡೆಯಲಾಗದೇ ಯುವತಿ ಹಾಗೂ ಆಕೆಯ ಮನೆಯವರು ಮನೆ ಖಾಲಿ ಮಾಡಿ ಬೇರೆ ಕಡೆಗೆ ಸ್ಥಳಾಂತರವಾಗಿದ್ದರು. ಆದರೂ ಬೆಂಬಿಡದ ಯುವಕ ಆಕೆಯನ್ನು ಪತ್ತೆ ಮಾಡಿ ಮತ್ತೆ ಕಿರುಕುಳ ನೀಡಿದ್ದ. ಸ್ನೇಹಿತನ ಜೊತೆಯಲ್ಲಿ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಯುವಕ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾನೆ.