Select Your Language

Notifications

webdunia
webdunia
webdunia
webdunia

ಪುರುಷನ ಮೇಲೆ ಪುರುಷನಿಂದಲೇ ಅತ್ಯಾಚಾರಕ್ಕೆ ಯತ್ನ

ಪುರುಷನ ಮೇಲೆ ಪುರುಷನಿಂದಲೇ ಅತ್ಯಾಚಾರಕ್ಕೆ ಯತ್ನ
ಬೆಂಗಳೂರು , ಗುರುವಾರ, 30 ಜೂನ್ 2016 (12:42 IST)
ನಗರದ ಸುಲಭ ಶೌಚಾಲಯದಲ್ಲಿ ಪುರುಷನೊಬ್ಬ ಪುರುಷನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವಿಚಿತ್ರ ಘಟನೆ ವರದಿಯಾಗಿದೆ.
 
ಸುಲಭ ಶೌಚಾಲಯದಲ್ಲಿ ಮೂತ್ರ ಮಾಡಲು ತೆರಳಿದ್ದ ವ್ಯಕ್ತಿಯೊಬ್ಬನಿಗೆ ಶೌಚಾಲಯದಲ್ಲಿ ಉಪಸ್ಥಿತನಿದ್ದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಲು ಪ್ರಯತ್ನಿಸಿದ್ದಾನೆ. ಆದರೆ, ಆತನ ಕಪಿಮುಷ್ಠಿಯಿಂದ ತಪ್ಪಿಸಿಕೊಂಡ ಹೊರ ಬಂದ ವ್ಯಕ್ತಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾನೆ.
 
ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದರೆ ಮಾನ ಮರ್ಯಾದೆ ಹೋಗುತ್ತದೆ ಎಂದು ಭಾವಿಸಿದ ವ್ಯಕ್ತಿ ಪೊಲೀಸ್ ಠಾಣೆಗೆ ದೂರು ನೀಡಿಲ್ಲ ಎನ್ನಲಾಗಿದೆ.
 
ಸುಲಭ ಶೌಚಾಲಯದಲ್ಲಿ ಪುರುಷನ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿದೆ ಎನ್ನುವ ಸುಳಿವು ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.  

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕರ ತರಬೇತಿ ಶಿಬಿರ: ಶಾಸಕರ ಗೈರಿಗೆ ಸಿಎಂ ಸಿದ್ದರಾಮಯ್ಯ ಅಸಮಾಧಾನ