Select Your Language

Notifications

webdunia
webdunia
webdunia
webdunia

ನಮ್ಮ ಮೆಟ್ರೋದಲ್ಲಿ ಜನದಟ್ಟಣೆ: ನೂಕು ನುಗ್ಗಲಿಗೆ ಬಿದ್ದು ಸೊಂಟ ಮುರಿದುಕೊಂಡ ವ್ಯಕ್ತಿ

ನಮ್ಮ ಮೆಟ್ರೋದಲ್ಲಿ ಜನದಟ್ಟಣೆ: ನೂಕು ನುಗ್ಗಲಿಗೆ ಬಿದ್ದು ಸೊಂಟ ಮುರಿದುಕೊಂಡ ವ್ಯಕ್ತಿ
ಬೆಂಗಳೂರು , ಗುರುವಾರ, 27 ಜುಲೈ 2017 (12:24 IST)
ಬೆಂಗಳೂರು:ನಮ್ಮ ಮೆಟ್ರೋದಲ್ಲಿ ಜನ ಸಂಚಾರ ಹೇರಳವಾಗಿದ್ದು, ಅದು ಪೀಕ್ ಅವರ್ ನಲ್ಲಂತೂ ಕೇಳುವುದೇ ಬೇಡ ಹೆಜ್ಜೆ ಇಡಲೂ ಸಾಧ್ಯವಿಲ್ಲದಷ್ಟು ಜನದಟ್ಟಣೆ, ನೂಕು ನುಗ್ಗಲು.  ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ಎಂ ಜಿ ರಸ್ತೆಗೆ ಪ್ರತಿನಿತ್ಯ ಸಂಚರಿಸುವ 59 ವರ್ಷದ ಬಾಲಕೃಷ್ಣ ರೈ ಮೆಟ್ರೋ ಹತ್ತಲು ಹೋಗಿ ನೂಕು ನುಗ್ಗಲಿನಿಂದ ಬಿದ್ದ ಪರಿಣಾಮ ಸೊಂಟದ ಮೂಳೆಯನ್ನೇ ಮುರಿದುಕೊಂಡಿರುವ ಘಟನೆ ನಡೆದಿದೆ.
 
ಕೆಂಪೇಗೌಡ ನಿಲ್ದಾಣದ ಪ್ಲಾಟ್ ಫಾರಂ 3 ರಲ್ಲಿ ಓರ್ವ ಯುವಕ ಜನದಟ್ಟಣೆ ಮಧ್ಯೆ ರೈ ಅವರನ್ನು ತಳ್ಳಿದ್ದು,  ಯುವಕ ನೂಕಿದ ರಭಸಕ್ಕೆ ರೈಯವರ ಸೊಂಟದ ಕೆಳಗೆ ಮೂಳೆ ಮುರಿದು ಪ್ಲಾಟ್ ಫಾರಂನಲ್ಲಿ ಬಿದ್ದಿದ್ದಾರೆ.
 
ರಕ್ಷಣಾ ಇಲಾಖೆಯಲ್ಲಿ ಅಕೌಂಟ್ಸ್ ಆಫೀಸರ್ ಆಗಿರುವ ಬಾಲಕೃಷ್ಣ ರೈ ಇದೀಗ ನಗರದ ಹೊಸ್ಮಾಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಹಿಪ್ ಬದಲಾವಣೆ ಸರ್ಜರಿ ನಡೆಯಲಿದೆ. ಹೃದ್ರೋಗಿಯಾಗಿರುವ ಬಾಲಕೃಷ್ಣ ರೈಯವರಿಗೆ ಸಕ್ಕರೆ ಕಾಯಿಲೆ ಕೂಡ ಇದೆ. ಹಾಗಾಗಿ ಗುಣಮುಖವಾಗಲು ಕನಿಷ್ಠ 3 ತಿಂಗಳು ಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಒಟ್ಟಿನಲ್ಲಿ ಪೀಕ್ ಅವರ್ ನಲ್ಲಿ ಮಟ್ರೊ ನಿಲ್ದಾಣದಲ್ಲಿ ಇರುವ ವಿಪರೀತ ಜನದಟ್ಟಣೆಯಲ್ಲಿ ಪ್ರಯಾಣಿಕರು ತಮ್ಮ ಸುರಕ್ಷತೆ ಕಾಪಾಡುವುದು ಅಗತ್ಯವಾಗಿದೆ 
 

Share this Story:

Follow Webdunia kannada

ಮುಂದಿನ ಸುದ್ದಿ

ವಾಟ್ಸ್‌ ಆ್ಯಪ್‌ ನಿಂದ ಬರಲಿದೆ ಹೊಸ ಆ್ಯಪ್‌