ಬೆಂಗಳೂರು: ಇಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿ ಏಕಾಏಕಿ ಕೆಳಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಜೆ.ಪಿ. ನಗರ ನಿವಾಸಿ ವೆಂಕಟೇಶ್(28) ಮೃತಪಟ್ಟವರು. ಈತ ಬಿಟಿಎಂ ಲೇಔಟ್ ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ. ರಾತ್ರಿ 11.45 ಕ್ಕೆ ದ್ವಿಚಕ್ರವಾಹನದಲ್ಲಿ ಮೇಲ್ಸೇತುವೆ ಬಳಿ ಬಂದು ತುಂಬಾ ಹೊತ್ತು ಮೊಬೈಲ್ ನಲ್ಲಿ ಮಾತನಾಡುತ್ತಿದ್ದ.
ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ. ಬಳಿಕ ಏಕಾಏಕಿ ಜಿಗಿದು ಆತ್ಮಹತ್ಯೆ ಮಾಡಿದ್ದಾನೆ. ಈತನ ಸಾವಿಗೆ ನಿಖರ ಕಾರಣವೇನೆಂದು ಪತ್ತೆಯಾಗಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.