Publish Date: Thu, 21 Mar 2024 (15:15 IST)
Updated Date: Thu, 21 Mar 2024 (15:20 IST)
ಬೆಂಗಳೂರು: ಮೆಟ್ರೋ ಬರುತ್ತಿದ್ದ ವೇಳೆ ಟ್ರ್ಯಾಕ್ ಮೇಲೆ ಜಿಗಿದು ವ್ಯಕ್ತಿ ಸಾವನ್ನಪ್ಪಿದ ಘಟನೆ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಘಟನೆ ನಡೆದಿದೆ.
ಇಂದು ಮಧ್ಯಾಹ್ನ ಮೆಟ್ರೋ ಬರುತ್ತಿದ್ದ ವೇಳೆ ಟ್ರ್ಯಾಕ್‌ಗೆ ಜಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಸಂಬಂಧ ಚಂದ್ರಲೇಜೌಟ್ ಪೊಲೀಸರು ಸ್ಥಳ ಪರಿಶೀಲನೆ ಮಾಡುತ್ತಿದ್ದಾರೆ. ಇದೀಗ ತನಿಖೆ ಹಿನ್ನೆಲೆ ವೈಟ್ ಫೀಲ್ಡ್‌ನಿಂದ ಚಲ್ಲಘಟಕ್ಕೆ ಮೈಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಮೆಟ್ರೋ ಸ್ಥಗಿತ ಹಿನ್ನೆಲೆ ಪ್ರಯಾಣಿಕರು ಆಕ್ರೋಶಗೊಂಡಿದ್ದಾರೆ. ಅದಲ್ಲದೆ ಅತ್ತಿಗುಪ್ಪೆ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಬಂದು ವಿಚಾರಣೆ ನಡೆಸುತ್ತಿದ್ದಾರೆ.