Select Your Language

Notifications

webdunia
webdunia
webdunia
webdunia

ವಿದ್ಯುತ್ ಶಾಕ್‌ನಿಂದ ವ್ಯಕ್ತಿ ಸಾವು

ವಿದ್ಯುತ್ ಶಾಕ್‌
ವಿದ್ಯುತ್ ಶಾಕ್‌ನಿಂದ ವ್ಯಕ್ತಿ ಸಾವಿಗೀಡಾಗಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಹುಣಸೆಘಟ್ಟ ಗ್ರಾಮದಲ್ಲಿ ನಡೆದಿದೆ.. ರವಿ ಎಂಬಾತ ಮೃತ ದುರ್ದೈವಿಯಾಗಿದ್ದಾನೆ.. ಕಳೆದ ರಾತ್ರಿ ತಮ್ಮ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ರವಿ ಈ ವೇಳೆ ರಸ್ತೆ ಬದಿ ಬೈಕ್ ನಿಲ್ಲಿಸಿ ಅಂಗಡಿಗೆ ತೆರಳಲು ಮುಂದಾಗಿದ್ದ. ಇನ್ನು ರಸ್ತೆ ಮಧ್ಯದಲ್ಲಿ ಅಳವಡಿಸಿದ್ದ ಕಬ್ಬಿಣದ ಡಿವೈಡರ್ ದಾಟುವ ವೇಳೆ ಕರೆಂಟ್ ಶಾಕ್ ಹೊಡೆದ ಪರಿಣಾಮ ಸ್ಥಳದಲ್ಲೇ ರವಿ ಸಾವನ್ನಪ್ಪಿದ್ದಾನೆ.. ಅರಸೀಕೆರೆ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಸ್ಥಳೀಯರ ಆಕ್ರೋಶ ಹೊರಹಾಕಿದ್ದಾರೆ.. ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಚಾಮರಾಜನಗರದಲ್ಲಿ ರೈಸ್ ಪುಲ್ಲಿಂಗ್ ದಂಧೆ