Publish Date: Sat, 28 Oct 2017 (12:07 IST)
Updated Date: Sat, 28 Oct 2017 (12:09 IST)
ವಿಚ್ಚೇದಿತ ಪತ್ನಿಯ ಮೇಲೆ ಸೇಡು ತೀರಿಸಿಕೊಳ್ಳಲು ಆಕೆಯ ಫೋಟೋ ಮತ್ತು ಪ್ರೋಫೈಲ್‌ನ್ನು ಮ್ಯಾಟ್ರಿಮೋನಿಯಲ್ ಮತ್ತು ಡೇಟಿಂಗ್ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಿದ 31 ವರ್ಷ ವಯಸ್ಸಿನ ಸಾಫ್ಟ್‌ವೇರ್ ಇಂಜಿನಿಯರ್‌ನನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರತಿಷ್ಠಿದ ಐಟಿ ಕಂಪೆನಿಯೊಂದರಲ್ಲಿ ಹಿರಿಯ ಸಾಫ್ಟ್‌ವೇರ್ ಇಂಜಿನಿಯರ್ ಹುದ್ದೆಯಲ್ಲಿರುವ ಹರ್ಷವರ್ಧನ್ ಭಟ್ ಎನ್ನುವ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪೊಲೀಸ್ ಮೂಲಗಳ ಪ್ರಕಾರ, ಹರ್ಷವರ್ಧನ್ ಭಟ್ ಮತ್ತು ಆತನ ಪತ್ನಿ ವಿಚ್ಚೇದನಕ್ಕಾಗಿ ಕೌಟಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ವಿಚ್ಚೇದನ ಪ್ರಕರಣ ನೆನೆಗುದಿಯಲ್ಲಿದೆ ಎನ್ನಲಾಗಿದೆ.
ಏತನ್ಮಧ್ಯೆ, ಭಟ್ ಪತ್ನಿಯ ಮೇಲೆ ಸೇಡು ತೀರಿಸಿಕೊಳ್ಳಲು ವೇಶ್ಯಾವಾಟಿಕೆಗೆ ಪ್ರಚೋದಿಸುವ ಹಲವಾರು ವೆಬ್‌ಸೈಟ್‌ಗಳಲ್ಲಿ ಪತ್ನಿಯ ಫೋಟೋ ಹಾಗೂ ಮೊಬೈಲ್ ನಂಬರ್‌ನ್ನು ಅಪ್ಲೋಡ್ ಮಾಡಿದ್ದಾನೆ. ನಂತರ ಪತ್ನಿಗೆ ಅನೇಕರು ಕರೆ ಮಾಡಿ ಕಾಲ್‌ಗರ್ಲ್ ರೀತಿಯಲ್ಲಿ ವರ್ತಿಸಿದ್ದಾರೆ.
ಇದರಿಂದ ಆತಂಕಗೊಂಡ ಆರೋಪಿ ಹರ್ಷವರ್ಧನ್ ಪತ್ನಿ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದಾಳೆ. ದೂರಿನ ಬಗ್ಗೆ ತನಿಖೆ ನಡೆಸಿದ ಪೊಲೀಸರು ಹರ್ಷವರ್ಧನ್ ಭಟ್‌ನ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್ ವಶಕ್ಕೆ ತೆಗೆದುಕೊಂಡು ಹಲವು ಪ್ರಕರಣಗಳನ್ನು ದಾಖಲಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.