ಪತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಹತ್ಯೆಗೈದಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯ ಎರಗೇರಾ ಗ್ರಾಮದಲ್ಲಿ ನಡೆದಿದೆ.
ಪತ್ನಿ ಮಾಧುರಿ ಪುಟ್ಟ ಮಕ್ಕಳಾದ ಮಾನಸ ಹಾಗೂ ಮಾತೃ ಎಂಬುವವರಿಗೆ ಈ ಕಿರಾತಕ ಪತಿ ಬೆಂಕಿ ಹಚ್ಚಿ ಸುಟ್ಟು ಕೊಲೈಗೈದಿದ್ದಾನೆ.
ಪತಿ ಪತ್ನಿಯರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಇಂದು ಆ ಜಗಳ ವಿಕೋಪಕ್ಕೆ ಹೋಗಿ ನೀಚ ಪತಿ ರಾಘವೇಂದ್ರ ಕೋಪದಿಂದ ಪತ್ನಿ ಹಾಗೂ ಮುದ್ದು ಮಕ್ಕಳ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಸುದ್ದಿ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಕಿರಾತಕ ಪತಿ ರಾಘವೇಂದ್ರನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಮೃತ ಮಾಧುರಿ ತೆಲಂಗಾಣ ಶಾಸಕಿ ಅರುಣ ಅವರ ಸಂಬಂಧಿ ಎಂದು ಹೇಳಲಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ