Publish Date: Wed, 27 Jul 2022 (09:40 IST)
Updated Date: Wed, 27 Jul 2022 (09:46 IST)
ಬೆಳಗಾವಿ: ಹೆಂಡತಿ ಮೇಲಿನ ಶಂಕೆಗೆ ತಂದೆ ನಾಲ್ಕು ವರ್ಷದ ಮಗನನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.
ಗೋಕಾಕ್ ತಾಲೂಕಿನ ಶಿಲ್ತಿಭಾವಿ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಘಟನೆ ನಡೆದಿದೆ. ಮಗ ಸ್ಥಳದಲ್ಲೇ ಸಾವನ್ನಪ್ಪಿದರೆ, ಪತ್ನಿ ಗಂಭೀರ ಗಾಯಗೊಂಡಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದರು. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಯುತ್ತಿದೆ.