Select Your Language

Notifications

webdunia
webdunia
webdunia
webdunia

ಒಂಟಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಚಿನ್ನಾಭರಣ ದೋಚಿಕೊಂಡು ಪರಾರಿಯಾದ ಕಾಮುಕ ಅರೆಸ್ಟ್

ಒಂಟಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಚಿನ್ನಾಭರಣ ದೋಚಿಕೊಂಡು ಪರಾರಿಯಾದ ಕಾಮುಕ ಅರೆಸ್ಟ್
ಬೆಂಗಳೂರು , ಭಾನುವಾರ, 20 ಜನವರಿ 2019 (06:46 IST)
ಬೆಂಗಳೂರು : ಒಂಟಿ ಮಹಿಳೆಯ ಮನೆಗೆ ನುಗ್ಗಿದ ಕಾಮುಕನೊಬ್ಬ ಆಕೆಯ ಮೇಲೆ ಅತ್ಯಾಚಾರ ಎಸಗಿದಲ್ಲದೆ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದೋಚಿಕೊಂಡು ಪರಾರಿಯಾದ ಘಟನೆ ನಗರದ ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿಡೇದ ಹಳ್ಳಿಯಲ್ಲಿ ನಡೆದಿದೆ.

ನಾಗರಾಜ್ ಎಂಬಾತ ಅತ್ಯಾಚಾರ ಎಸಗಿದ ಕಾಮುಕ. ವೃತ್ತಿಯಲ್ಲಿ ಆಟೋ ಡ್ರೈವರ್ ಆಗಿರುವ ಈತ ಕಳೆದ 16ರಂದು 30 ವರ್ಷದ ಮಹಿಳೆಯೊಬ್ಬರು, ಮನೆಯಲ್ಲಿ ಒಂಟಿಯಾಗಿರುವುದನ್ನು ತಿಳಿದುಕೊಂಡು ತಡರಾತ್ರಿ ಮನೆಗೆ ಬಂದು ಬಾಗಿಲು ಬಡಿದಿದ್ದಾನೆ. ಮಹಿಳೆ ಬಾಗಿಲು ತೆರೆಯುತ್ತಿದ್ದಂತೆ ಏಕಾಏಕಿ ಮನೆಯೊಳಗೆ ನುಗ್ಗಿ ಮಹಿಳೆಯನ್ನು ಬೆಡ್ ರೂಮ್ ಗೆ ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ.

ನಂತರ ಮಹಿಳೆ ಆತನಿಂದ ಹೇಗೋ ತಪ್ಪಿಸಿಕೊಂಡು ಬಾತ್ ರೂಮ್ ಒಳಗೆ ಬಾಗಿಲು ಹಾಕಿಕೊಂಡು ಸಹಾಯಕ್ಕಾಗಿ ಜೋರಾಗಿ ಕೂಗಿದ್ದಾಳೆ. ಅಷ್ಟರಲ್ಲಿ ನಾಗರಾಜ್ ಮಹಿಳೆಯ ಮನೆಯಲ್ಲಿದ್ದ ಚಿನ್ನಾಭರಣ, ಕೆಲ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದಾನೆ.

 

ಈ ಘಟನೆಗೆ ಸಂಬಂಧಿಸಿದಂತೆ ಮಹಿಳೆ ಆರೋಪಿಯ ವಿರುದ್ಧ ಬಗಲಗುಂಟೆ ಪೊಲೀಸರು ದೂರು ನೀಡಿದ್ದು, ಪ್ರಕರಣ  ದಾಖಲಿಸಿಕೊಂಡ ಪೊಲೀಸರು ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಡ್ಯಾನ್ಸ್ ಮಾಡುವುದನ್ನು ನಿಲ್ಲಿಸಿ ಎಂದಿದ್ದಕ್ಕೆ ಮದುವೆ ಮನೆಯಲ್ಲಿ ನಡೆದಿದೆ ಇಂತಹ ಘೋರ ಕೃತ್ಯ