Webdunia - Bharat's app for daily news and videos

Install App

ಯುವತಿಯ ಮೇಲೆ ಅತ್ಯಾಚಾರವೆಸಗಿ ಆಕೆಯ ಪತಿಗೆ ವಿಡಿಯೋ ರವಾನಿಸಿದ ಕಾಮುಕ

Webdunia
ಸೋಮವಾರ, 27 ನವೆಂಬರ್ 2017 (16:42 IST)
ಕಳೆದ ಐದು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ 25 ವರ್ಷದ ಯುವಕನನ್ನು ಪೊಲೀಸರು ಶ್ರೀನಿವಾಸಪುರ ಪಟ್ಟಣದಲ್ಲಿ ಬಂಧಿಸಿದ್ದಾರೆ.
 
ಜಾಖೀರ್ ಖಾನ್ ಮೊಹಲ್ಲಾದ ಆರೋಪಿ ಆರೀಫ್, ತನ್ನ ಇಬ್ಬರು ಸಹಚರರೊಂದಿಗೆ ಐದು ವರ್ಷಗಳ ಹಿಂದೆ ಗಫಾರ್‌ಖಾನ್ ಮೊಹಲ್ಲಾದ 15 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿ ವಿಡಿಯೋ ಮಾಡಿಕೊಂಡಿದ್ದನು. ಐದು ವರ್ಷಗಳ ನಂತರ ಯುವತಿಯ ವಿವಾಹವಾಗಿತ್ತು. ಮತ್ತೆ ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿದ ಆರೀಫ್ ವಿಡಿಯೋವನ್ನು ಆಕೆಯ ಪತಿಗೆ ರವಾನಿಸಿದ್ದ ಎನ್ನಲಾಗಿದೆ. 
 
ಆರೋಪಿಗಳು ಮತ್ತೆ ಬ್ಲ್ಯಾಕ್ ಮೇಲ್ ಮಾಡಲು ಆರಂಭಿಸಿದ್ದರಿಂದ ಯುವತಿ ಪೋಷಕರೊಂದಿಗೆ ತೆರಳಿ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ದೂರು ನೀಡಿದ್ದಾಳೆ.
 
ಕಳೆದ 2012 ರಲ್ಲಿ ಆರಿಫ್ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ತಂಪು ಪಾನೀಯದಲ್ಲಿ ಮತ್ತು ಬರಿಸುವ ಔಷಧಿ ನೀಡಿ ಅತ್ಯಾಚಾರವೆಸಗಿದ್ದನು. ಐದು ವರ್ಷಗಳ ನಂತರ ಅದೇ ವಿಡಿಯೋವನ್ನು ಮಹಿಳೆಯ ಪತಿಗೆ ರವಾನಿಸಿದ್ದನು ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಮಹಿಳೆಯ ಪತಿ ಆಕೆಗೆ ವಿಚ್ಚೇದನ ನೀಡಿದ್ದಾನೆ.  
 
ಆರೋಪಿಗಳು ಪರಾರಿಯಾಗಿದ್ದು ಶೀಘ್ರವೇ ಬಂಧಿಸುವ ವಿಶ್ವಾಸವಿದೆ ಎಂದು ಶ್ರೀನಿವಾಸಪುರ ಪೊಲೀಸ್ ಠಾಣೆಯ ಅಧಿಕಾರಿ ಬಿ.ಆರ್.ಜಗದೀಶ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments