Webdunia - Bharat's app for daily news and videos

Install App

ವಿವಾಹಿತ ಮಹಿಳೆ ಓಲೈಸಲು ಹೋಗಿ ನೇಣಿಗೆ ಶರಣಾದ ಯುವಕ

Webdunia
ಭಾನುವಾರ, 2 ಜುಲೈ 2017 (14:34 IST)
ವಿವಾಹಿತ ಮಹಿಳೆಯನ್ನು ಓಲೈಸಲು ಯತ್ನಿಸಿ ಬೈಗುಳ ತಿಂದಿದ್ದ 20 ವರ್ಷದ ಯುವಕನೊಬ್ಬ ತಮ್ಮ ಸಂಬಂಧಿಕರ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ವರದಿಯಾಗಿದೆ. 
 
ನಗರದ ಮಲ್ಲತಹಳ್ಳಿಯ ಅಂಬೇಡ್ಕರ್ ಕಾಲೇಜಿನ ಬಳಿಯಿರುವ ಆತನ ಸಂಬಂಧಿ ಮನೆಯಲ್ಲಿ 20 ವರ್ಷದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
 
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಮೂಲದ ಸುರೇಶ್‌ ಯಲಹಂಕದಲ್ಲಿ ಸಹೋದರನೊಂದಿಗೆ ವಾಸಿಸುತ್ತಿದ್ದ. ಸುರೇಶ್ ಮ್ಮಲತಹಳ್ಳಿಯ ಅನ್ನಪೂರ್ಣೇಶ್ವರಿ ನಗರದಲ್ಲಿರುವ ಸಂಬಂಧಿಕ ನಾಗರಾಜ್ ಮನೆಗೆ ಪದೇ ಪದೇ ಭೇಟಿ ನೀಡುತ್ತಿದ್ದ. ಈ ಸಂದರ್ಭದಲ್ಲಿ ಅದೇ ಪ್ರದೇಶದಲ್ಲಿ ವಾಸವಾಗಿದ್ದ ಹಸಗೂಸಿನ ತಾಯಿಯಾಗಿರುವ ವಿವಾಹಿತ ಮಹಿಳೆಯ ಪ್ರೇಮಪಾಶಕ್ಕೆ ಸಿಲುಕಿದ್ದಾನೆ.  
 
ಸುರೇಶ್, ಅದು ಹೇಗೋ ವಿವಾಹಿತ ಮಹಿಳೆಯ ಮೊಬೈಲ್ ನಂಬರ್ ಪಡೆದು ಮೇಸೆಜ್ ಕಳುಹಿಸಲು ಆರಂಭಿಸಿದ್ದಾನೆ. ಸುರೇಶ್ ಕೃತ್ಯದಿಂದ ಬೇಸರಗೊಂಡ ಮಹಿಳೆ ತನ್ನ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಇದರಿಂದ ಆಕ್ರೋಶಗೊಂಡ ಪೋಷಕರು ಸುರೇಶ್‌ನನ್ನು ಮನೆಗೆ ಕರೆಸಿ ವಾರ್ನಿಂಗ್ ನೀಡಿದ್ದಾರೆ. ಸುರೇಶ್ ತನ್ನ ತಪ್ಪಿಗೆ ಕ್ಷಮೆಯಾಚಿಸುವುದಾಗಿ ತಿಳಿಸಿದ್ದಾನೆ.    
 
ನಂತರ ಅಪಮಾನದಿಂದಾಗಿ ಮೊದಲ ಮಹಡಿಯ ಕೋಣೆಗೆ ತೆರಳಿದ ಸುರೇಶ್, ಅಲ್ಲಿದ್ದ ಸೀರೆಯಿಂದ ಫ್ಯಾನ್‌ಗೆ ನೇಣುಹಾಕಿಕೊಂಡಿದ್ದಾನೆ. ಸುರೇಶ್ ತುಂಬಾ ಹೊತ್ತು ಬಾರದಿರುವುದರಿಂದ ಮೊದಲ ಮಹಡಿಗೆ ಹೋಗಿ ನೋಡಿದಾಗ ಆತ ನೇಣಿಗೆ ಶರಣಾಗಿರುವುದು ಕಂಡುಬಂದಿದೆ.
 
ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಸುರೇಶ್ ಮೃತದೇಹವನ್ನು ಪೋಸ್ಟ್‌ಮಾರ್ಟಂ‌ಗಾಗಿ ಆಸ್ಪತ್ರೆಗೆ ರವಾನಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ರಾಪ್ತ ಮಗಳ ಮೇಲೆ ಮೂರು ವರ್ಷ ಲೈಂಗಿಕ ದೌರ್ಜನ್ಯ: ಪಾಪಿ ಅಪ್ಪನಿಗೆ ಜೀವಾವಧಿ ಶಿಕ್ಷೆ

ಯೋಗಿ ಸಿಎಂ ಆದ್ಮೇಲೆ ಯುಪಿಯಲ್ಲಿ 15 ಸಾವಿರ ಎನ್‌ಕೌಂಟರ್‌, 30 ಸಾವಿರ ಕ್ರಿಮಿನಲ್‌ಗಳ ಅರೆಸ್ಟ್‌

ಜಮೀನು ಒತ್ತುವರಿ ಪ್ರಕರಣ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್‌

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಡಿಎನ್‌ಎ ಟೆಸ್ಟ್‌ಗೆ ಮುಂದಾದ ಪಂಜಾಬ್ ಸರ್ಕಾರ

ಶುಭಾಂಶು ಶುಕ್ಲಾ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಸ್ರೋ

ಮುಂದಿನ ಸುದ್ದಿ
Show comments