ಚಾಕುವಿನಿಂದ‌ ಚುಚ್ಚಿ ವ್ಯಕ್ತಿ ಕೊಲೆ

Webdunia
ಗುರುವಾರ, 12 ಅಕ್ಟೋಬರ್ 2023 (14:20 IST)
ನಗರದಲ್ಲಿ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಮದನ್ (32)  ಎಂಬಾತನನ್ನು ಕೊಲೆ ಮಾಡಲಾಗಿದೆ.ಬಾಣಸವಾಡಿ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದ್ದು,ಹಳೆ ದ್ವೇಷದ‌ ಹಿನ್ನಲೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.
 
ಅಂಗಡಿಯೊಂದರ  ಒಳಭಾಗದಲ್ಲಿದ್ದ ಮದನ್ ರನ್ನ ಆ ಸಂದರ್ಭದಲ್ಲಿ ಸ್ಕೆಚ್ ಹಾಕಿ  ಕೊಲೆ ಮಾಡಿದ್ದಾರೆ.ರಾಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,ರಾಮಮೂರ್ತಿನಗರ ಪೊಲೀಸರಿಂದ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.ಚೆನೈನಲ್ಲಿ ಮದನ್ ವಾಸವಾಗಿದ್ದ.ಹಲವು ದಿನಗಳ ಹಿಂದೆ ಹೃತ್ವಿಕ್ ಎಂಬಾತನ ಮೇಲೆ ಮದನ್ ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ಹಲ್ಲೆ ನಡೆಸಿದ್ದ.ಹೀಗಾಗಿ ಹಳೆ ದ್ವೇಷದ ಹಿನ್ನಲೆ‌ ಮದನ್ ನ್ನ ಆರೋಪಿಗಳು ಹತ್ಯೆ ಮಾಡಿದ್ದಾರೆ.ಮದನ್ ಬರುವಿಕೆಗಾಗಿ ಹಂತಕರು ಕಾದು ಕುಳಿತಿದ್ದರು.ಮದನ್ ಬರುತ್ತಿದ್ದಂತೆ ಮೂರು ಜನರು ಲಾಂಗ್ ಹಿಡಿದು ಅಟ್ಯಾಕ್ ಮಾಡಿದ್ದಾರೆ.ಅಟ್ಯಾಕ್‌ನಲ್ಲಿ ಮದನ್‌ ಕೈ ಯನ್ನು  ಆರೋಪಿಗಳು ಕತ್ತರಿಸಿದ್ರು.ಗಾಯಗೊಂಡ ವ್ಯಕ್ತಿಯನ್ನ ಆಸ್ಪತ್ರೆಗೆ ಪೊಲೀಸರು ದಾಖಲಿಸಲು ಮುಂದಾದರು.ಆಸ್ಪತ್ರೆಯಲ್ಲಿ‌ ಚಿಕಿತ್ಸೆ  ಫಲಕಾರಿಯಾಗದೇ ಮದನ್ ಸಾವನಾಪ್ಪಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಆಪರೇಷನ್ ಸಿಂಧೂರವನ್ನು ಹಾಡಿಹೊಗಲಿದ ರಾಷ್ಟ್ರಪತಿ: ದೇಶಕ್ಕೆ ಮುರ್ಮು ಗಣರಾಜ್ಯೋತ್ಸವ ಸಂದೇಶ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು: ಎಚ್‌ಡಿ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments