ವಿಮಾನದ ತುರ್ತು ನಿರ್ಗಮನ ದ್ವಾರ ತೆಗೆಯಲು ವ್ಯಕ್ತಿ ಪ್ರಯತ್ನ?

Webdunia
ಶನಿವಾರ, 8 ಏಪ್ರಿಲ್ 2023 (10:55 IST)
ಬೆಂಗಳೂರು : ರಾಷ್ಟ್ರ ರಾಜಧಾನಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕನೊಬ್ಬ ಕಂಠಪೂರ್ತಿ ಕುಡಿದು ನಶೆಯಲ್ಲಿ ಹುಚ್ಚಾಟ ಮೆರೆದಿದ್ದಾನೆ. ವಿಮಾನ ಹಾರಾಟದ ವೇಳೆಯೇ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಪ್ರಯತ್ನಿಸಿದ ವ್ಯಕ್ತಿಯ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ.
 
ವರದಿಗಳ ಪ್ರಕಾರ ಘಟನೆ ಶುಕ್ರವಾರ ಬೆಳಗ್ಗೆ 7:56ರ ವೇಳೆಗೆ ವಿಮಾನ ಸಂಖ್ಯೆ 6ಇ 308 ರಲ್ಲಿ ನಡೆದಿದೆ. ಆರೋಪಿಯನ್ನು ಪ್ರತೀಕ್ (40) ಎಂದು ಗುರುತಿಸಲಾಗಿದೆ. ಆತ ಕಂಠಪೂರ್ತಿ ಮದ್ಯಪಾನ ಮಾಡಿ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ. 

ಪ್ರಯಾಣಿಕನ ನಡತೆ ಕಂಡು ತಕ್ಷಣವೇ ಎಚ್ಚೆತ್ತ ವಿಮಾನದ ಸಿಬ್ಬಂದಿ ಈ ಬಗ್ಗೆ ಕ್ಯಾಪ್ಟನ್ಗೆ ಮಾಹಿತಿ ನೀಡಿದ್ದಾರೆ. ಆತನನ್ನು ತಡೆದು, ವಿಮಾನ ಬೆಂಗಳೂರಿಗೆ ಬಂದಿಳಿದ ಬಳಿಕ ಸಿಐಎಸ್ಎಫ್ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ. ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಯಾಣಿಕನ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಘಟನೆ ಬಗ್ಗೆ ಹೆಚ್ಚಿನ ತನಿಖೆಯನ್ನು ಪ್ರಾರಂಭಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಸಿಡ್ನಿ: ಗುಂಡಿನ ದಾಳಿಯಲ್ಲಿ ಹಲವಾರು ಮಂದಿ ಸಾವು

ಆವರಿಸಿದ ದಟ್ಟ ಮಂಜು, ಕಾಲುವೆಗೆ ಉರುಳಿದ ಕಾರು, ದಂಪತಿ ದುರಂತ ಅಂತ್ಯ

ಇದೇ24ರಂದು ಬೆಂಗಳೂರಿನಿಂದ ಹುಬ್ಬಳ್ಳಿ ವಿಜಯಪುರಕ್ಕೆ ವಿಶೇಷ ರೈಲು

ಮುಂದಿನ ಸುದ್ದಿ
Show comments