Webdunia - Bharat's app for daily news and videos

Install App

ಮಕ್ಕಳ ಆಕ್ಷೇಪಾರ್ಹ ಛಾಯಾಚಿತ್ರಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್

Webdunia
ಮಂಗಳವಾರ, 27 ಅಕ್ಟೋಬರ್ 2020 (09:35 IST)
ಮುಂಬೈ : ಮಕ್ಕಳ ಆಕ್ಷೇಪಾರ್ಹ ಛಾಯಾಚಿತ್ರಗಳನ್ನು ಮಾರಾಟ ಮಾಡುತ್ತಿದ್ದ ಮುಂಬೈ ಮೂಲದ ವ್ಯಕ್ತಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಜೂನಿಯರ್ ಫಿಲ್ಮ್ ಆರ್ಟಿಸ್ಟ್ ಎಂದು ಹೇಳಿಕೊಳ್ಳುತ್ತಿದ್ದ ಆ ವ್ಯಕ್ತಿ ವಿದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಚಲನಚಿತ್ರದಲ್ಲಿ ಪಾತ್ರಗಳನ್ನು ನೀಡುವ ನೆಪವೊಡ್ಡಿ ಆಕ್ಷೇಪಾರ್ಹ ಭಂಗಿಗಳಲ್ಲಿ ಪೋಸ್ ಕೊಡುವಂತೆ ಹೇಳಿ ಫೋಟೊ ತೆಗೆದು ಅದನ್ನು ವಿವಿಧ ದೇಶಗಳ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದ. ಆತ 1000 ಜನರನ್ನು ಸಂಪರ್ಕಿಸಿ ಮಕ್ಕಳೊಂದಿಗೆ ಸಂಭಾಷಣೆ ನಡೆಸಿ ವಿಡಿಯೋ ಕಾಲ್ ಮಾಡಿ ಆಕ್ಷೇಪಾರ್ಹ ಭಂಗಿಗಳಲ್ಲಿ ಪೋಸ್ ಕೊಡುವಂತೆ ಹೇಳುತ್ತಿದ್ದ. ಇದಕ್ಕೆ ಮಕ್ಕಳು ನಿರಾಕರಿಸಿದರೆ ಮಕ್ಕಳನ್ನು ಹೆದರಿಸುತ್ತಿದ್ದ ಎನ್ನಲಾಗಿದೆ.

ಈ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಆತನ ನಿವಾಸದ ಮೇಲೆ ದಾಳಿ ನಡೆಸಿದ ಸಿಬಿಐ ಅಧಿಕಾರಿಗಳು ಆತನನ್ನು ಬಂಧಿಸಿ, ಅವನ ಬಳಿಯಿದ್ದ ಲ್ಯಾಪ್ ಟಾಪ್, ಮೊಬೈಲ್ ನ್ನು ವಶಪಡಿಸಿಕೊಂಡಿದ್ದಾರೆ. ಹಾಗೇ ದಂಧೆಯಲ್ಲಿ ಭಾಗಿಯಾಗಿರಬಹುದಾದ ಇತರ ವ್ಯಕ್ತಿಗಳನ್ನು ಬಂಧಿಸಲು ಪ್ರಯತ್ನ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments