Publish Date: Thu, 21 Nov 2019 (06:39 IST)
Updated Date: Thu, 21 Nov 2019 (06:48 IST)
ಲಕ್ನೋ : ನಾಲ್ಕು ವರ್ಷದ ಬಾಲಕಿಯ ಮೇಲೆ ಮೂರು ಮಕ್ಕಳ ತಂದೆಯೊಬ್ಬ ಅತ್ಯಾಚಾರ ಎಸಗಿ ಆಕೆಯ ಮನೆಗೆ ಬೆಂಕಿ ಹಚ್ಚಿದ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದಿದೆ.
ರಾತ್ರಿಯ ವೇಳೆ ಬಾಲಕಿಗೆ ತಿಂಡಿಯ ಆಸೆ ತೋರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಆದರೆ ಬಾಲಕಿ ಹೇಗೋ ತನ್ನ ಮನೆಸೇರಿದ್ದು, ಪೋಷಕರಿಗೆ ಈ ವಿಚಾರ ತಿಳಿಸಿದ್ದಾಳೆ. ಆಗ ಪೋಷಕರು ಆರೋಪಿಯ ವಿರುದ್ಧ ಪೊಲೀಸರಿಗೆ ದೂರು ನೀಡಲು ಮುಂದಾದಾಗ ಆರೋಪಿ ಅವರಿಗೆ ಹಣದ ಆಮಿಷ ಒಡ್ಡಿದ್ದಾನೆ. ಇದನ್ನು ನಿರಾಕರಿಸಿದ್ದಕ್ಕೆ ಅವರ ಮನೆಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ.
ಇದನ್ನು ಕಂಡ ಸ್ಥಳಿಯರು ಆರೋಪಿನ್ನು ಪೊಲೀಸರಿಗೆ ಒಪ್ಪಿಸಿದ್ದು, ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಶುರು ಮಾಡಿದ್ದಾರೆ.