ಮದ್ದೂರು ಗಲಭೆ ಬೆನ್ನಲ್ಲೇ ಮಂಡ್ಯ ಹೆಚ್ಚುವರಿ ಎಸ್‌ಪಿ ವರ್ಗಾವಣೆ

Sampriya
ಶುಕ್ರವಾರ, 12 ಸೆಪ್ಟಂಬರ್ 2025 (19:44 IST)
Photo Credit X
ಬೆಂಗಳೂರು: ಗಣೇಶ ವಿಸರ್ಜನೆ ವೇಳೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಕೋಮುಗಲಭೆ ಬೆನ್ನಲ್ಲೇ ಮಂಡ್ಯ ಹೆಚ್ಚುವರಿ ಎಸ್‌ಪಿಯನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಬಿಡಿಸಿದೆ. 

ಪೊಲೀಸ್ ಮೂಲಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ಕರ್ನಾಟಕ ಸರ್ಕಾರ ಮಂಡ್ಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಿದೆ ಎಂದು ಪೊಲೀಸ್ ಮೂಲಗಳು ಶುಕ್ರವಾರ ತಿಳಿಸಿವೆ.

 ಮದ್ದೂರಿನಲ್ಲಿ ನಡೆದ ಕೋಮು ಗಲಭೆಯ ಪರಿಣಾಮವಾಗಿ ಈ ವರ್ಗಾವಣೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಕಳೆದ ಭಾನುವಾರ (ಸೆಪ್ಟೆಂಬರ್ 7) ಗಣೇಶ ವಿಸರ್ಜನೆ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದಿತ್ತು. ಇದು ಕೋಮು ಉದ್ವಿಗ್ನತೆಗೆ ಕಾರಣವಾಯಿತು. ಈ ಘರ್ಷಣೆ ಸಂಬಂಧ 22ಮಂದಿಯನ್ನು ಪೊಲೀಸರು ಬಂಧಿಸಿದ್ದು, ಇನ್ನೂ 7 ಮಂದಿಗಾಗಿ ಹುಟುಕಾಟ ಆರಂಭಿಸಿದೆ. 

ಇನ್ನೂ ಕಲ್ಲು ತೂರಾಟ ಸಂಬಂಧ ಬಿಜೆಪಿ ಮದ್ದೂರು ಪಟ್ಟಣದಲ್ಲಿ ಬುಧವಾರ ಮತ್ತು ಗುರುವಾರ ಬೃಹತ್ ಪ್ರದರ್ಶನ ನಡೆಸಿತು. ಇದೀಗ ಈ ಬೆಳವಣಿಗೆ ಬೆನ್ನಲ್ಲೇ ಮಂಡ್ಯ ಹೆಚ್ಚುವರಿ ಎಸ್‌ಪಿಯನ್ನು ವರ್ಗಾವಣೆ ಮಾಡಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments