Publish Date: Fri, 13 Sep 2019 (11:25 IST)
Updated Date: Fri, 13 Sep 2019 (11:27 IST)
ಮಂಡ್ಯ : ಹಾಲು ಒಕ್ಕೂಟದ ನಾಮ ನಿರ್ದೇಶಕರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಮಂಡ್ಯ ಜಿಲ್ಲಾ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಲು ಒಕ್ಕೂಟಕ್ಕೆ ಪ್ರಸನ್ನ ಅವರನ್ನು ನೇಮಿಸಲಾಗಿದೆ. ಪ್ರಸನ್ನ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಬೆಂಬಲಿಗರಾಗಿದ್ದು, ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇದೀಗ ಎಸ್.ಎಂ.ಕೃಷ್ಣ ಅವರ ಮನವಿಯ ಮೇರೆಗೆ ಸಿಎಂ ಪ್ರಸನ್ನ ಅವರನ್ನು ಹಾಲು ಒಕ್ಕೂಟದ ನಾಮ ನಿರ್ದೇಶಕರಾಗಿ ನೇಮಿಸಿದ್ದಾರೆ.
ಇದಕ್ಕೆ ಮಂಡ್ಯ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ನಾಗಣ್ಣ ಗೌಡ ವಿರೋಧ ವ್ಯಕ್ತಪಡಿಸಿದ್ದು, ಜಿಲ್ಲಾ ಸಮಿತಿ ಸೂಚಿಸಿದ ಹೆಸರು ಪರಿಗಣಿಸುವಂತೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲುಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.