Publish Date: Fri, 27 Apr 2018 (09:06 IST)
Updated Date: Fri, 27 Apr 2018 (09:08 IST)
ಮಂಡ್ಯ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ರೆಬಲ್ ಸ್ಟಾರ್ ಅಂಬರೀಷ್ ನಿರ್ಧರಿಸಿದ ಮೇಲೂ ಇಲ್ಲಿನ ಕಾಂಗ್ರೆಸ್ ನಾಯಕರಲ್ಲಿ ಅಸಮಾಧಾನ ನಿಂತಿಲ್ಲ.
ಮಂಡ್ಯ ಕ್ಷೇತ್ರಕ್ಕೆ ಅಂಬರೀಷ್ ಬದಲಿಗೆ ರವಿಕುಮಾರ್ ಗಣಿಗ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಆಯ್ಕೆ ಮಾಡಿತ್ತು. ಇದು ಸ್ಥಳೀಯ ಕಾಂಗ್ರೆಸ್ ನಾಯಕರಲ್ಲೇ ಅಸಮಾಧಾನಕ್ಕೆ ಕಾರಣವಾಗಿದೆ.
ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ತಮ್ಮನ್ನು ಕೇಳದೆಯೇ ಮಂಡ್ಯಕ್ಕೆ ಅಭ್ಯರ್ಥಿ ಆಯ್ಕೆ ಮಾಡಿದ್ದಾರೆ ಎಂದು ಸ್ಥಳೀಯ ಕಾಂಗ್ರೆಸ್ಸಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.