Select Your Language

Notifications

webdunia
webdunia
webdunia
Friday, 4 April 2025
webdunia

ಮಾಣೆಕ್ ಷಾ ಪರೇಡ್ ಮೈದಾನ ಸಜ್ಜು

Manek Shah Parade Ground Outfit
bangalore , ಬುಧವಾರ, 25 ಜನವರಿ 2023 (18:48 IST)
ಬೆಂಗಳೂರಿನಲ್ಲಿ 74ನೇ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬೆಂಗಳೂರು ಜಿಲ್ಲಾಡಳಿತ ಮಂಡಳಿ ನಿರ್ಧರಿಸಿದ್ದು, ಗಣರಾಜ್ಯೋತ್ಸವ ಆಚರಣೆಗೆ ನಗರದ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನ ಸಜ್ಜುಗೊಂಡಿದೆ. ಕಾರ್ಯಕ್ರಮದಲ್ಲಿ 8 ಸಾವಿರ ಮಂದಿ ಭಾಗಿಯಾಗುವ ನಿರೀಕ್ಷೆಗಳಿದ್ದು, ಎಲ್ಲೆಡೆ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. ಗಣರಾಜ್ಯೋತ್ಸವ ಸಿದ್ಧತೆಗಳ ಕುರಿತು ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಮಾಹಿತಿ ನೀಡಿದ್ದು, ಜನವರಿ 26 ರಂದು ನಡೆಯುವ ಪರೇಡ್‌ನಲ್ಲಿ ಕೆಎಸ್‌ಆರ್‌ಪಿ, ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಸಿಸಿ, ಸೇವಾದಳ ಮತ್ತು ವಿವಿಧ ಶಾಲಾ ಮಕ್ಕಳು ಸೇರಿದಂತೆ 1,520 ಸಿಬ್ಬಂದಿಯನ್ನು ಒಳಗೊಂಡ 38 ಸ್ಕ್ವಾಡ್‌ಗಳು ಭಾಗವಹಿಸಲಿದ್ದಾರೆಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಭಾರತೀಯ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಲು ನಗರದ ಉತ್ತರಹಳ್ಳಿ ಸರ್ಕಾರಿ ಶಾಲೆಯ 750 ಶಾಲಾ ಮಕ್ಕಳು ಸಂವಾದ, ಹಾಡುಗಳು ಮತ್ತು ನೃತ್ಯವನ್ನು ಒಳಗೊಂಡ ವಿಶೇಷ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಿದ್ದಾರೆ. ಮಂಗಳವಾರ ಅಭ್ಯಾಸದ ಅಂಗವಾಗಿ ಮೈದಾನದಲ್ಲಿ ರೈತರಿಗೆ ಸಮರ್ಪಿತ ಹಾಡುಗಳು, ಕಲರಿಪಯಟ್ಟು ಮತ್ತು ಸಶಸ್ತ್ರ ಪಡೆಗಳಿಂದ ಮೋಟಾರ್ ಸೈಕಲ್ ಸ್ಟಂಟ್‌ಗಳು ನಡೆದವು. ಗುರುವಾರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸಂದರ್ಭದಲ್ಲಿ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಸ್‌ ಅಪಘಾತ: 15 ಮಂದಿಗೆ ಗಾಯ