Select Your Language

Notifications

webdunia
webdunia
webdunia
webdunia

ಮಂಗಳೂರು-ಬೆಂಗಳೂರು ಸಂಚಾರ ತಲೆ ನೋವು ಮತ್ತೆ ಶುರು

Shirad Ghat road

Krishnaveni K

ಬೆಂಗಳೂರು , ಸೋಮವಾರ, 29 ಜುಲೈ 2024 (14:08 IST)
ಬೆಂಗಳೂರು: ಮಳೆಯ ಅಬ್ಬರ ಆರಂಭವಾದಾಗಿನಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ, ರೈಲು ಸಂಚಾರ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಶಿರಾಡಿ, ಚಾರ್ಮಾಡಿ ಘಾಟಿಯಲ್ಲಿ ಪ್ರತಿನಿತ್ಯ ಗುಡ್ಡ ಕುಸಿತವಾಗುತ್ತಿದ್ದು ಪ್ರಯಾಣಿಕರು ಪರದಾಡುವಂತಾಗಿದೆ.

ನಿನ್ನೆ ಶನಿವಾರ ಶಿರಾಡಿ ಮತ್ತು ಚಾರ್ಮಾಡಿ ಘಾಟಿಯಲ್ಲಿಭೂಕುಸಿತವಾದ ಹಿನ್ನಲೆಯಲ್ಲಿ ಕೆಲವು ಕಾಲ ಸಂಚಾರ ವ್ಯತ್ಯಯವಾಗಿತ್ತು. ಬಳಿಕ ತಕ್ಷಣವೇ ಜೆಸಿಬಿಗಳ ಸಹಾಯದಿಂದ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಆದರೆ ನಿನ್ನೆ ಮತ್ತೆ ಶಿರಾಡಿ ಘಾಟಿಯಲ್ಲಿ ಭೂಕುಸಿತವಾಗಿದೆ.

ಇದರಿಂದಾಗಿ ಕಿಲೋಮೀಟರ್ ಗಟ್ಟಲೇ ವಾಹನಗಳು ಮುಂದೆ ಸಾಗಲಾರದೇ ಸಾಲುಗಟ್ಟಿ ನಿಂತಿದ್ದವು. ತಕ್ಷಣವೇ ಕಾರ್ಯಪ್ರವೃತ್ತರಾದ ಸಿಬ್ಬಂದಿ ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಆದರೆ ಎರಡು ಗಂಟೆಗಳ ಕಾಲ ಸಂಚಾರ ವ್ಯತ್ಯಯವಾಗಿ ತಲುಪಬೇಕಾದ ಗಮ್ಯ ಸ್ಥಳವನ್ನು ಸಮಯಕ್ಕೆ ಸರಿಯಾಗಿ ತಲುಪದೇ ಪ್ರಯಾಣಿಕರು ಸಂಕಷ್ಟ ಅನುಭವಿಸಿದರು.

ಘಾಟಿ ರಸ್ತೆಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಪದೇ ಪದೇ ಭೂ ಕುಸಿತವಾಗುತ್ತಿದೆ. ಈಗಿನ ಪರಿಸ್ಥಿತಿ ನೋಡಿದರೆ ಮತ್ತಷ್ಟು ಗುಡ್ಡ ಕುಸಿತ ಪ್ರಕರಣಗಳು ವರದಿಯಾಗುವುದಂತೂ ನಿಶ್ಚಿತ. ಶಿರಾಡಿ ಮತ್ತು ಚಾರ್ಮಾಡಿ ಎರಡೂ ಘಾಟಿ ರಸ್ತೆಗಳಲ್ಲಿ ಪ್ರಯಾಣಿಕರು ಜೀವ ಕೈಯಲ್ಲಿ ಹಿಡಿದೇ ಸಂಚರಿಸಬೇಕಾದ ಪರಿಸ್ಥಿತಿಯಾಗಿದೆ. ಹೀಗಾಗಿ ಅನಿವಾರ್ಯವಾದರೆ ಮಾತ್ರ ಈ ರಸ್ತೆಯಲ್ಲಿ ಪ್ರಯಾಣಿಸುವುದು ಉತ್ತಮ.
 

Share this Story:

Follow Webdunia kannada

ಮುಂದಿನ ಸುದ್ದಿ

ದೇವೇಗೌಡರ ಕುಟುಂಬವು ಮುಡಾ ಫಲನುಭವಿಗಳಲ್ಲವೇ: ಸಿಎಂ ಸಿದ್ದರಾಮಯ್ಯ