ಮಂಗಳೂರು ಚಲೋಗೆ ಬ್ರೆಕ್ : ಬಿಜೆಪಿಯ ಪ್ರಮುಖ ನಾಯಕರು ಪೊಲೀಸ್ ವಶಕ್ಕೆ

Webdunia
ಗುರುವಾರ, 7 ಸೆಪ್ಟಂಬರ್ 2017 (15:06 IST)
ಮಂಗಳೂರು ಚಲೋ ಬೈಕ್ ರ್ಯಾಲಿಗೆ ನಿಷೇಧ ಹೇರಿರುವುದನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಮಂಗಳೂರಿನ ಜ್ಯೋತಿ ಸರ್ಕಲ್‌ನಲ್ಲಿ ಜಮಾವಣೆಗೊಂಡ ಸಾವಿರಾರು ಕಾರ್ಯಕರ್ತರನ್ನು ಉದ್ದೇಶಿಸಿ ಬಿಜೆಪಿ ನಾಯಕರು ಮಾಡಿದ ಭಾಷಣದ ನಂತರ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಲಾಯಿತು.
 
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಮಾಜಿ ಗೃಹ ಸಚಿವ ಆರ್.ಅಶೋಕ್ ಸೇರಿದಂತೆ ಇತರ ಮುಖಂಡರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.
 
ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರನ್ನು ಬಂಧಿಸಿದ ಪೊಲೀಸರು ಅವರನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ದು ನಂತರ ಬಿಡುಗಡೆಗೊಳಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.     

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments