Publish Date: Tue, 14 Apr 2026 (19:33 IST)
Updated Date: Tue, 14 Apr 2026 (19:36 IST)
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳ ಹಿಂದೆ ಸಂಭವಿಸಿದ ಸ್ಫೋಟ ಪ್ರಕರಣದ ಆರೋಪಿ ಮಹಮ್ಮದ್ ಶಾರಿಕ್‌ಗೆ ಶಿಕ್ಷೆಯ ಪ್ರಮಾಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯವು ಏಪ್ರಿಲ್ 17 ರಂದು ಪ್ರಕಟಿಸಲಿದೆ.
ಮೂರು ತಿಂಗಳ ಹಿಂದೆ ಮೊಹಮ್ಮದ್ ಶಾರಿಕ್ ಸಲ್ಲಿಸಿದ್ದ ತಪ್ಪೊಪ್ಪಿಗೆ ಅರ್ಜಿಯನ್ನು ನ್ಯಾಯಾಲಯ ಇತ್ತೀಚೆಗೆ ಸ್ವೀಕರಿಸಿದೆ. ಶುಕ್ರವಾರವೂ ಪ್ರಕರಣದ ಹೆಚ್ಚಿನ ವಿಚಾರಣೆ ನಡೆದಿದ್ದು, ಈ ಸಂದರ್ಭದಲ್ಲಿ ಆರೋಪಿಗೆ ವಿಧಿಸಲಾಗುವ ಶಿಕ್ಷೆಯನ್ನು ಏಪ್ರಿಲ್ 17 ರಂದು ಪ್ರಕಟಿಸುವುದಾಗಿ ನ್ಯಾಯಾಧೀಶರು ಸೂಚಿಸಿದ್ದಾರೆ.
ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು 2024ರಲ್ಲಿ ಶಾರಿಕ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ್ದರು.
2022ರ ನವೆಂಬರ್ 19ರಂದು ಸಂಜೆ 4.40ರ ಸುಮಾರಿಗೆ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾರಿಕ್ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಕುಕ್ಕರ್‌ನಲ್ಲಿ ಬಚ್ಚಿಟ್ಟಿದ್ದ ಸುಧಾರಿತ ಸ್ಫೋಟಕ (ಐಇಡಿ) ಸ್ಫೋಟಗೊಂಡಿತ್ತು.